Home ಟಾಪ್ ಸುದ್ದಿಗಳು ಲೆಬನಾನ್ ಮೇಲೆ ಇಸ್ರೇಲ್ ದಾಳಿ: ಮೃತರ ಸಂಖ್ಯೆ 492ಕ್ಕೇರಿಕೆ

ಲೆಬನಾನ್ ಮೇಲೆ ಇಸ್ರೇಲ್ ದಾಳಿ: ಮೃತರ ಸಂಖ್ಯೆ 492ಕ್ಕೇರಿಕೆ

ಲೆಬನಾನ್: ದಕ್ಷಿಣ ಲೆಬನಾನ್ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 492ಕ್ಕೆ ಏರಿಕೆಯಾಗಿದೆ ಎಂದು ಲೆಬನಾನ್ ನ ಆರೋಗ್ಯ ಸಚಿವಾಲಯ ತಿಳಿಸಿದೆ.


‘ಮೃತರಲ್ಲಿ 35 ಮಕ್ಕಳು ಮತ್ತು 58 ಮಹಿಳೆಯರೂ ಸೇರಿದ್ದಾರೆ. ಇಸ್ರೇಲ್ ಸೇನೆಯ ದಾಳಿಗೆ ಕಳೆದ ಒಂದು ವಾರದಲ್ಲಿ 1,645 ಮಂದಿ ಗಾಯಗೊಂಡಿದ್ದಾರೆ’ ಎಂದು ಆರೋಗ್ಯ ಸಚಿವ ಫಿರಾಸ್ ಅಬಿಯದ್ ಹೇಳಿದ್ದಾರೆ.


‘ಶತ್ರುವಿನ ದಾಳಿಗೆ ಪ್ರತ್ಯುತ್ತರವಾಗಿ ಹೈಫಾದಲ್ಲಿರುವ ಸೇನಾ ನೆಲೆಗಳನ್ನು ಗುರಿಯಾಗಿಸಿ ರಾಕೆಟ್ ದಾಳಿ ನಡೆಸಿದ್ದೇವೆ’ ಎಂದು ಹಿಜ್ಬುಲ್ಲಾ ಪ್ರಕಟಣೆ ತಿಳಿಸಿದೆ.

Join Whatsapp
Exit mobile version