ಕಲಬುರಗಿ: ಬೆಂಗಳೂರಿನಲ್ಲಿ ಇಸ್ರೋ ಸಂಸ್ಥೆಗೆ ಜಾಗ ನೀಡಿದ್ದು ಕಾಂಗ್ರೆಸ್ ಸರ್ಕಾರ. ನಾವು ಬಿತ್ತಿರುವ ಬೀಜದ ಮರದ ಹಣ್ಣನ್ನು ಬಿಜೆಪಿಯವರು ತಿನ್ನುತ್ತಿದ್ದಾರೆ ಎಂದು ವಿಧಾನ್ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ವೈಜ್ಞಾನಿಕ ನೆಲಗಟ್ಟಿನಲ್ಲಿ ಅಚಲ ನಂಬಿಕೆ ಇಟ್ಟುಕೊಂಡಿದೆ. ನಾವು ಬಿಜೆಪಿಯವರ ರೀತಿ ಮೂಢನಂಬಿಕೆ ಇಟ್ಟುಕೊಂಡಿಲ್ಲ. ಬೆಂಗಳೂರಿನಲ್ಲಿ ಇಸ್ರೋ ಸಂಸ್ಥೆಗೆ ಜಾಗ ನೀಡಿದ್ದು ಕಾಂಗ್ರೆಸ್ ಸರ್ಕಾರ. ನಾವು ಬಿತ್ತಿರುವ ಬೀಜದ ಮರದ ಹಣ್ಣನ್ನು ಬಿಜೆಪಿಯವರು ತಿನ್ನುತ್ತಿದ್ದಾರೆ. ಚಂದ್ರಯಾನದ ಬಹುತೇಕ ವಿಜ್ಞಾನಿಗಳು ಹಿಂದುಳಿದ ವರ್ಗದವರು. ಅಧಿಕಾರ ಬಂದಾಗ ಕೆಲವೇ ಸಮುದಾಯ ಅಧಿಕಾರ ಅನುಭವಿಸುತ್ತಿದೆ. ಎಲ್ಲಾ ವರ್ಗದವರಿಗೂ ಅಧಿಕಾರ ಸಿಗುವಂತಾಗಲಿ ಎಂದರು.