Home ಟಾಪ್ ಸುದ್ದಿಗಳು ಇಸ್ರೋದಿಂದ ಚಂದ್ರಯಾನ-3 ನೌಕೆ ಉಡಾವಣೆ

ಇಸ್ರೋದಿಂದ ಚಂದ್ರಯಾನ-3 ನೌಕೆ ಉಡಾವಣೆ

ಶ್ರೀಹರಿಕೋಟ: ಐತಿಹಾಸಿಕ ಚಂದ್ರಯಾನ-3 ಉಡಾವಣೆ ಶುಕ್ರವಾರ ಮಧ್ಯಾಹ್ನ ಆಂಧ್ರಪ್ರದೇಶದ ಶ್ರೀಹರಿಕೋಟದ ಸತೀಶ್ ಧವನ್ ಉಡ್ಡಯನ ಕೇಂದ್ರದಲ್ಲಿ ನೆರವೇರಿದೆ.


ಲ್ಯಾಂಡರ್ (ವಿಕ್ರಮ್) ಹಾಗೂ ರೋವರ್ (ಪ್ರಜ್ಞಾನ) ಹೊತ್ತ ರಾಕೆಟ್ ನಭಕ್ಕೆ ಚಿಮ್ಮಿತು. ಮಧ್ಯಾಹ್ನ 02:35 ನಿಮಿಷಕ್ಕೆ ರಾಕೆಟ್ ಉಡಾವಣೆಗೊಂಡಿತು.


ಪ್ರಯಾಣವು 40 ದಿನಗಳನ್ನು ತೆಗೆದುಕೊಳ್ಳುತ್ತದೆ. ಆಗಸ್ಟ್ 23 ರಂದು ಬಾಹ್ಯಾಕಾಶ ನೌಕೆಯು ಚಂದ್ರನ ಮೇಲೆ ಸ್ಪರ್ಶಿಸುವ ನಿರೀಕ್ಷೆಯಿದೆ.

Join Whatsapp
Exit mobile version