Home ಟಾಪ್ ಸುದ್ದಿಗಳು ಇಸ್ರೋ ವಿಜ್ಞಾನಿಗಳಿಗೆ 17 ತಿಂಗಳಿನಿಂದ ಸಂಬಳ ಬಂದಿಲ್ಲ: ದಿಗ್ವಿಜಯ ಸಿಂಗ್

ಇಸ್ರೋ ವಿಜ್ಞಾನಿಗಳಿಗೆ 17 ತಿಂಗಳಿನಿಂದ ಸಂಬಳ ಬಂದಿಲ್ಲ: ದಿಗ್ವಿಜಯ ಸಿಂಗ್

ದೆಹಲಿ: ಇಸ್ರೋ ವಿಜ್ಞಾನಿಗಳು 17 ತಿಂಗಳಿನಿಂದ ತಮ್ಮ ಸಂಬಳವನ್ನು ಪಡೆದಿಲ್ಲ ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಬುಧವಾರ ಹೇಳಿದ್ದಾರೆ.


ಚಂದ್ರಯಾನ 3 ಚಂದ್ರನ ಮೇಲ್ಮೈಯಲ್ಲಿ ಇಳಿಯಲು ಸಿದ್ದತೆ ನಡೆಸುತ್ತಿದ್ದಂತೆ ಹಿರಿಯ ಕಾಂಗ್ರೆಸ್ ನಾಯಕ, ಇಸ್ರೋ ವಿಜ್ಞಾನಿಗಳ ಸಂಬಳ ವಿತರಣೆಯನ್ನು ಪ್ರಧಾನಿ ಗಮನಿಸಬೇಕು ಎಂದು ಹೇಳಿದ್ದಾರೆ.


ಚಂದ್ರಯಾನದ ಯಶಸ್ವಿ ಚಂದ್ರನ ಲ್ಯಾಂಡಿಂಗ್ಗಾಗಿ ಇಸ್ರೋ ವಿಜ್ಞಾನಿಗಳು ಪ್ರಯತ್ನ ನಡೆಸುತ್ತಿರುವುದು ನಮಗೆ ಹೆಮ್ಮೆಯ ವಿಷಯವಾಗಿದೆ. ಅವರ ಯಶಸ್ಸಿಗಾಗಿ ನಾವು ದೇವರಲ್ಲಿ ಪ್ರಾರ್ಥಿಸುತ್ತೇವೆ. ಆದರೆ ಇದನ್ನು ಮಾಡಿದ ವಿಜ್ಞಾನಿಗಳಿಗೆ 17 ತಿಂಗಳಿನಿಂದ ಸಂಬಳ ಬಂದಿಲ್ಲ ಎಂದು ಪತ್ರಿಕೆಗಳಲ್ಲಿ ವರದಿಯಾಗಿದೆ. ಪ್ರಧಾನಿಯವರು ಇದನ್ನು ಗಮನಿಸಬೇಕು ಎಂದು ದಿಗ್ವಿಜಯ ಸಿಂಗ್ ಹೇಳಿದ್ದಾರೆ.

Join Whatsapp
Exit mobile version