ನವದೆಹಲಿ: ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಹೊಸ ವರ್ಷದ ಮೊದಲ ದಿನವೇ ಐತಿಹಾಸಿಕ ಸಾಧನೆ ಮಾಡಿದೆ. ಎಕ್ಸ್–ರೇ ಮೂಲಗಳ ನಿಗೂಢತೆ ಹಾಗೂ ಕಪ್ಪುರಂಧ್ರದ ನಿಗೂಢ ಜಗತ್ತಿನ ವಿಸ್ಮಯಗಳನ್ನು ತಿಳಿಯಲು ಇಸ್ರೊ ನಿರ್ಮಿತ ಎಕ್ಸ್–ರೇ ಪೋಲಾರಿಮೀಟರ್ ಉಪಗ್ರಹವನ್ನು (ಎಕ್ಸ್ ಪೊಸ್ಯಾಟ್) ಇಂದು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ.
ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಉಪಗ್ರಹ ಉಡಾವಣಾ ಕೇಂದ್ರದಿಂದ ಇಂದು ಬೆಳಿಗ್ಗೆ 9.10ಕ್ಕೆ ‘ಎಕ್ಸ್ ಪೊಸ್ಯಾಟ್’ ಸೇರಿದಂತೆ ವಿದ್ಯಾಸಂಸ್ಥೆಗಳು ಮತ್ತು ಸ್ಟಾರ್ಟ್ಅಪ್ಗಳಿಗೆ ಸಂಬಂಧಿಸಿದ ಇತರೆ 9 ಉಪಗ್ರಹಗಳನ್ನು ಹೊತ್ತ ಪಿಎಸ್ ಎಲ್ ವಿ ವಾಹಕವು ಗಗನಕ್ಕೆ ಚಿಮ್ಮಿದೆ.
ಇದು ಮೊದಲ ಸಂಪೂರ್ಣ ವೈಜಾನಿಕ ಉಪಗ್ರಹವಾಗಿದೆ.