Home ಟಾಪ್ ಸುದ್ದಿಗಳು ಈಶ್ವರಪ್ಪಗೆ ನೋಟಿಸ್ ಜಾರಿ, ವಿಚಾರಣೆಗೆ ಹಾಜರಾಗಲು ಸೂಚನೆ

ಈಶ್ವರಪ್ಪಗೆ ನೋಟಿಸ್ ಜಾರಿ, ವಿಚಾರಣೆಗೆ ಹಾಜರಾಗಲು ಸೂಚನೆ

ದಾವಣಗೆರೆ: ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಾದ ಬೆನ್ನಲ್ಲೇ ದಾವಣಗೆರೆ ಬಡಾವಣೆ ಠಾಣೆಯ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿರುವ ಈಶ್ವರಪ್ಪ ನಿವಾಸಕ್ಕೆ ತೆರಳಿ ನೋಟಿಸ್ ಜಾರಿ ಮಾಡಿದ್ದಾರೆ. ಈಶ್ವರಪ್ಪ ಅವರು ನೋಟಿಸ್ ಸ್ವೀಕರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸಿ ಆರ್ ಪಿ ಸಿ ಕಲಂ 41 ಎ ಉಪ ಕಲಂ 1ರ ಅಧಿಕಾರ ಚಲಾಯಿಸಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದು, ಕಲಂ 505(1),(ಸಿ), 505(2) 506 ಐಪಿಸಿ ಅಡಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ನೋಟಿಸ್ ಜಾರಿ ನೀಡಿದ್ದಾರೆ.

ಪ್ರಕರಣದಲ್ಲಿ ಕೆಲವು ಸತ್ಯಾಂಶ ಹಾಗೂ ಸನ್ನಿವೇಶವನ್ನು ಖಚಿತಪಡಿಸಬೇಕಿದೆ. ಅಲ್ಲದೆ ಪ್ರಕರಣದಲ್ಲಿ ವಿಚಾರಣೆ ಮಾಡಲು ಸಾಕಷ್ಟು ಪೂರಕ ಕಾರಣ ಕಂಡು ಬಂದಿದೆ. ಹಾಗಾಗಿ ಕೇಸಿಗೆ ಸಂಬಂಧಿಸಿದಂತೆ ಆರೋಪದ ವಿತರಣೆಗಾಗಿ ಫೆಬ್ರವರಿ 15ರಂದು ಬೆಳಗ್ಗೆ 10:30 ಕ್ಕೆ ಠಾಣೆಗೆ ಹಾಜರಾಗಬೇಕೆಂದು ನೋಟಿಸ್​ನಲ್ಲಿ ಪೊಲೀಸರು ಸೂಚಿಸಿದ್ದಾರೆ.

Join Whatsapp
Exit mobile version