ನವದೆಹಲಿ: ಖ್ಯಾತ ಪತ್ರಕರ್ತ, ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮುಹಮ್ಮದ್ ಝುಬೈರ್’ರನ್ನು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ಇಂದು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಝುಬೈರ್ ಬಂಧನದ ಬೆನ್ನಲ್ಲೇ ಟ್ವಿಟ್ಟರ್’ನಲ್ಲಿ #IStandWithZubair ಟ್ರೆಂಡ್ ಆಗುತ್ತಿದ್ದು, ಬಂಧನದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಇಲ್ಲಿ ದ್ವೇಷ ಭಾಷಣ ಮಾಡುವುದು ಅಪರಾಧವಲ್ಲ, ಆದರೆ ದ್ವೇಷದ ಭಾಷಣವನ್ನು ಬಹಿರಂಗಪಡಿಸುವುದು ಅಪರಾಧವಾಗಿದೆ, ಪತ್ರಕರ್ತರನ್ನು ಟಾರ್ಗೆಟ್ ಮಾಡುವುದನ್ನು ನಿಲ್ಲಿಸಿ. ಝಬೈರ್ ರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ದಿ ವೈರ್ ಸುದ್ದಿ ಸಂಸ್ಥೆಯ ಪತ್ರಕರ್ತ ಕೌಶಿಕ್ ರಾಜ್ ಒತ್ತಾಯಿಸಿದ್ದಾರೆ.
ಝುಬೈರ್ ಬಂಧನವನ್ನು ನಾನು ಬಲವಾಗಿ ಖಂಡಿಸುತ್ತೇನೆ ಎಂದು ಟಿಆರ್ ಎಸ್ ಮುಖಂಡ ಸತೀಶ್ ರೆಡ್ಡಿ ಟ್ವೀಟ್ ಮಾಡಿ ಬೆಂಬಲ ಸೂಚಿಸಿದ್ದಾರೆ. ಅಲ್ಲದೇ ಝುಬೈರ್ ಬಂಧನವಾದ ಕೆಲ ನಿಮಿಷದಲ್ಲೇ ಹದಿನೈದು ಸಾವಿರಕ್ಕೂ ಹೆಚ್ಚು ಬೆಂಬಲ ಸೂಚಿಸಿ ಟ್ವೀಟ್ ಮಾಡಲಾಗಿದೆ.