ಐಟಿ, ಇಡಿ, ಸಿಬಿಐ ಎಲ್ಲಾ ಕೇಂದ್ರದ ವ್ಯಾಪ್ತಿಯಲ್ಲಿವೆ: ಸಚಿವ ಸಂತೋಷ್ ಲಾಡ್

Prasthutha|

ಧಾರವಾಡ: ಐಟಿ, ಇಡಿ, ಸಿಬಿಐ ಎಲ್ಲಾ ಕೇಂದ್ರದ ವ್ಯಾಪ್ತಿಯಲ್ಲಿವೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.

- Advertisement -

ಬೆಂಗಳೂರಿನಲ್ಲಿ ನಡೆದ ಐಟಿ ದಾಳಿಯಲ್ಲಿ ಸಿಕ್ಕ 40 ಕೋಟಿ ರೂ. ಹಣ ಕಾಂಗ್ರೆಸ್ಗೆ ಸೇರಿದ್ದು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ಪ್ರತಿಕ್ರಿಯಿಸಿದ ಅವರು, ವಿರೋಧ ಪಕ್ಷದವರು ಸಾಮಾನ್ಯವಾಗಿ ಈ ರೀತಿಯ ಆರೋಪ ಮಾಡಿಯೇ ಮಾಡುತ್ತಾರೆ ಎಂದು ಟಾಂಗ್ ನೀಡಿದರು.


ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ಐಟಿ, ಇಡಿ, ಸಿಬಿಐ ಎಲ್ಲವೂ ಅವರ ಕೈಯಲ್ಲಿದೆ. ಅವರು ಆಡಿದ್ದೇ ಆಟ. ಈಗ ಎಲ್ಲವೂ ತನಿಖೆ ನಡೆಯುತ್ತಿದೆ. ತನಿಖೆ ಮುಗಿಯವವರೆಗೂ ಕಾಯೋಣ ಎಂದರು.

Join Whatsapp