ಬಿಜೆಪಿಗೆ ರಾಜ್ಯಾಧ್ಯಕ್ಷ, ವಿಧಾನಸಭೆ ವಿಪಕ್ಷ ನಾಯಕನ ಆಯ್ಕೆ ಮಾಡದ ಶೋಚನಿಯ ಪರಿಸ್ಥಿತಿ: ಜಗದೀಶ್ ಶೆಟ್ಟರ್

Prasthutha|

ಹುಬ್ಬಳ್ಳಿ: ರಾಜ್ಯಾಧ್ಯಕ್ಷ, ವಿಧಾನಸಭೆ ವಿಪಕ್ಷ ನಾಯಕನ ಆಯ್ಕೆ ಮಾಡದ ಶೋಚನಿಯ ಪರಿಸ್ಥಿತಿ ಬಿಜೆಪಿಗೆ ಬಂದಿದೆ. ಇದನ್ನು ಜನ ಅರ್ಥ ಮಾಡಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡುತ್ತಾ ಶೆಟ್ಟರ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅಧ್ಯಕ್ಷ ಸ್ಥಾನದ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ತನ್ನ ಹೆಸರು ಬಂದದ್ದು ಊಹಾಪೋಹವೆಂದು ಹೇಳಿದ್ದಾರೆ. ಆದರೆ ಇದು ಸುಳ್ಳು. ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬರೀ ಹೆಸರು ಕೇಳಿ ಬರೋದೆ ಆಗಿದೆ. ಯಾರು ಅಧ್ಯಕ್ಷರು ಅಂತ ಬಹಿರಂಗಗೊಳಿಸಲಿ. ದೆಹಲಿ ವರಿಷ್ಠರು ಒಂದು ಹೆಸರು ಬಿಟ್ಟು ಅದರ ಪ್ಲಸ್, ಮೈನಸ್ ನೋಡಿ ಅದು ಫೇಲ್ ಆದರೆ ಮತ್ತೆ ಬೇರೆ ಹೆಸರು ಬಿಡುತ್ತಾರೆ ಎಂದು ಹೇಳಿದ್ದಾರೆ

ಸಂಕ್ರಾಂತಿ ನಂತರ ಕಾಂಗ್ರೆಸ್ ನಲ್ಲಿ ಅಲ್ಲೋಲ ಕಲ್ಲೋಲ ಆಗುತ್ತೆ ಎಂದು ಹೇಳುತ್ತಾರೆ. ಹೀಗೆ ಆಶಾ ಭಾವನೆ ಮೂಡಿಸಿ ಕಾರ್ಯಕರ್ತರನ್ನು, ಪಕ್ಷ ಬಿಟ್ಟು ಹೋಗುತ್ತಿರುವ ನಾಯಕರನ್ನು ಹಿಡಿದಿಟ್ಟುಕೊಳ್ಳುವ ಪ್ರಯತ್ನ ಬಿಜೆಪಿ ಮಾಡುತ್ತಿದೆ. ಆದರೆ ಕಾಂಗ್ರೆಸ್ ಸರ್ಕಾರಕ್ಕೆ ಏನೂ ಆಗುವುದಿಲ್ಲ. ಈ ಸರ್ಕಾರ ಗಟ್ಟಿಮುಟ್ಟಾಗಿ ಐದು ವರ್ಷ ಇರುತ್ತೆ ಎಂದ ಶೆಟ್ಟರ್, 104 ಇದ್ದಾಗಾಲೇ ಏನೂ ಮಾಡಲು ಆಗಿಲ್ಲ. ಈಗ ಏನು ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.

- Advertisement -

Join Whatsapp