ಬೆಂಗಳೂರು: ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ ವಿಚಾರವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನೆಯಲ್ಲಿ ಕೆಲಸ ಮಾಡುತ್ತಿದ್ದ ಒಬ್ಬ ಮಹಿಳೆ ನೀಡಿದ ದೂರು ಆಧರಿಸಿ ಮಹಿಳಾ ಆಯೋಗ ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದೆ. ಮುಖ್ಯಮಂತ್ರಿಯವರೇ ಖುದ್ದಾಗಿ ನಿಗಾ ವಹಿಸಿದ್ದು, ಗೃಹಸಚಿವರು ಉಸ್ತುವಾರಿ ವಹಿಸಿದ್ದಾರೆ ಎಂದರು.
ಬಿಜೆಪಿ ನಾಯಕರು ಈ ವಿಚಾರವಾಗಿ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂದು ಕಾದು ನೋಡುತ್ತೇನೆ. ಇಲ್ಲಿ ಮಹಿಳೆಯರ ಘನತೆ ಅತೀ ಮುಖ್ಯವಾದ ವಿಚಾರ. ಕಾನೂನು ತನ್ನದೇ ಆದ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.