Home ಟಾಪ್ ಸುದ್ದಿಗಳು ನ. 1 ರಂದು ಐಟಿಬಿಟಿ ಕಂಪನಿಗಳು ಕನ್ನಡ ಬಾವುಟ ಹಾರಿಸುವುದು ಕಡ್ಡಾಯ: ಡಿಕೆಶಿ

ನ. 1 ರಂದು ಐಟಿಬಿಟಿ ಕಂಪನಿಗಳು ಕನ್ನಡ ಬಾವುಟ ಹಾರಿಸುವುದು ಕಡ್ಡಾಯ: ಡಿಕೆಶಿ

ಬೆಂಗಳೂರು: 50ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಿದ್ದೇವೆ. ನವೆಂಬರ್ 1ರಂದು ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವ ಆಚರಿಸಬೇಕು. ನವೆಂಬರ್ 1ರಂದು ಎಲ್ಲ ಶಾಲಾ, ಕಾಲೇಜುಗಳು, ಕಾರ್ಖಾನೆಗಳು ಮತ್ತು ಐಟಿಬಿಟಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಲೇಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೂಚನೆ ನೀಡಿದರು.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಜಿಲ್ಲೆಯಲ್ಲಿ ಶೇ 50 ರಷ್ಟು ಜನ ಹೊರಗಿನಿಂದ ಬಂದವರಿದ್ದಾರೆ. ಹೊರಗಿನಿಂದ ಬಂದವರು ಸಹ ಕನ್ನಡ ಕಲಿಯಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ಮಾಡಬೇಕು. ರಾಷ್ಟ್ರಧ್ವಜದ ರೀತಿ ಕನ್ನಡ ಬಾವುಟಕ್ಕೆ ಗೌರವ ಕೊಡಬೇಕು. ಬಾವುಟ ಹಾರಿಸುವ ಮೂಲಕ ಶ್ರದ್ಧಾ, ಭಕ್ತಿ ಗೌರವ ತೋರಿಸಬೇಕು ಎಂದರು.


ಬೆಂಗಳೂರಿನಲ್ಲಿ ಎಲ್ಲರೂ ರಾಜೋತ್ಸವ ಆಚರಣೆ ಮಾಡುತ್ತಾರೆ. ರಾಜ್ಯೋತ್ಸವ ಆಚರಣೆಗೆ ಯಾವ ಕನ್ನಡ ಸಂಘಟನೆಗಳು ಕೂಡ ಒತ್ತಡ ಹೇರಬಾರದು. ಸರ್ಕಾರವೇ ಆದೇಶಿಸಿದೆ. ಅದರಂತೆ ರಾಜೋತ್ಸವ ಆಚರಣೆ ಮಾಡುತ್ತಾರೆ. ಆಚರಣೆ ಮಾಡದ ಸಂಸ್ಥೆ ವಿರುದ್ಧ ಯಾವ ರೀತಿ ಕ್ರಮ ಕೈಗೊಳ್ಳಬೇಕು ಅಂತ ಸರ್ಕಾರ ನಿರ್ಧಾರ ಮಾಡುತ್ತೆ. ಕನ್ನಡ ಸಂಘಟನೆಗಳು ಖಾಸಗಿ ಸಂಸ್ಥೆಗಳ ಬಳಿ ಹೋಗಿ ಗಲಾಟೆ, ಬೆದರಿಸುವುದು ಬೇಡ ಎಂದು ಹೇಳಿದರು.

Join Whatsapp
Exit mobile version