ಸಂಕಷ್ಟದ ಸಮಯದಲ್ಲಿ ಭಾರತ್ ಬಂದ್ ಗೆ ಕರೆ ನೀಡಿರುವುದು ಸರಿಯಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

Prasthutha|

ಹುಬ್ಬಳ್ಳಿ: ಕೊರೋನಾ ಸಂಕಷ್ಟದಿಂದ ಈಗಷ್ಟೇ ಜನರು ಚೇತರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ರೈತ ಸಂಘಟನೆಗಳು ಭಾರತ್ ಬಂದ್‌ ಗೆ ಕರೆ ನೀಡಿರುವುದು ಒಳ್ಳೆಯ ನಿರ್ಧಾರವಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೋವಿಡ್‌ನಿಂದಾಗಿ ಎಲ್ಲ ಕ್ಷೇತ್ರಗಳ ಕಾರ್ಯಚಟುವಟಿಕೆಗಳು ಕುಂಠಿತಗೊಂಡಿದ್ದವು. ಸದ್ಯ ಕೋವಿಡ್ ಸೋಂಕು ಪ್ರಮಾಣ ಇಳಿಮುಖವಾಗುತ್ತಿದ್ದು, ಮಾರುಕಟ್ಟೆಯಲ್ಲಿ ವ್ಯಾಪಾರ, ವಹಿವಾಟು ಪುನರಾರಂಭವಾಗುತ್ತಿವೆ. ಈ ಸಂದರ್ಭದಲ್ಲಿ ಪ್ರತಿಭಟನೆ, ಬಂದ್‌ ನಡೆಸಿದರೆ ಜನಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ರೈತ ಸಂಘಟನೆಗಳು ಬಂದ್‌ ನಡೆಸದೆ ಸಹಕಾರ ನೀಡಬೇಕು ಎಂದು ತಿಳಿಸಿದರು.

- Advertisement -