ರೈಲ್ವೆ ಸಚಿವರ ರಾಜೀನಾಮೆಗೆ ಆಗ್ರಹಿಸುವುದು ಸರಿಯಲ್ಲ: ಹೆಚ್‌ಡಿಡಿ

Prasthutha|

ಬೆಂಗಳೂರು: ಒಡಿಶಾ ತ್ರಿವಳಿ ರೈಲು ದುರಂತ ಸಂಭವಿಸಿದ ಬಳಿಕ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ದಣಿವರಿಯದಂತೆ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಹೇಳಿದ್ದಾರೆ.

- Advertisement -

ಮಂಗಳವಾರ ಮಾಧ್ಯಮವೊಂದರ ಜೊತೆ ಮಾತನಾಡಿದ ಅವರು, ರೈಲು ದುರಂತ ಸಂಭವಿಸಿದ ಬಳಿಕ ಅಲ್ಲಿನ ಪರಿಸ್ಥತಿಯನ್ನು ಸಹಜಸ್ಥಿತಿಗೆ ತರಲು ಅಶ್ವಿನಿ ವೈಷ್ಣವ್ ಅವರು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಅವರು ನಿರಂತರವಾಗಿ ಕೆಲಸ ಮಾಡುತ್ತಿದ್ದು, ಈ ಹಂತದಲ್ಲಿ ರಾಜೀನಾಮೆ ನೀಡುವಂತೆ ಆಗ್ರಹಿಸುವುದು ಸರಿಯಲ್ಲ ಎಂದರು.

2024ರ ಚುನಾವಣೆಗೆ ವಿರೋಧ ಪಕ್ಷಗಳು ಒಗ್ಗೂಡುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನಾವು ಯಾವುದೇ ಚರ್ಚೆಯನ್ನು ಮಾಡಿಲ್ಲ. ಮೊದಲನೆಯದಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷವನ್ನು ಬಲಪಡಿಸಲು ನಾವು ಬಯಸುತ್ತೇವೆ ಎಂದು ಸ್ಪಷ್ಟನೆ ನೀಡಿದರು.

- Advertisement -

ಜೂನ್ 2ರಂದು ಒಡಿಶಾದ ಬಾಲಸೋರ್‌ನಲ್ಲಿ ತ್ರಿವಳಿ ರೈಲುಗಳು ಏಕಕಾಲಕ್ಕೆ ಡಿಕ್ಕಿಯಾದ ಪರಿಣಾಮ ಭಾರೀ ಪ್ರಮಾಣದ ನಷ್ಟವುಂಟಾಗಿದೆ. ಈ ಘಟನೆಯಲ್ಲಿ 288 ಮಂದಿ ಸಾವನ್ನಪ್ಪಿದ್ದು, 1,100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರೈಲು ದುರಂತದ ತನಿಖೆಯನ್ನು ಸಿಬಿಐಗೆ ಒಪ್ಪಿಸಲಾಗಿದೆ.

Join Whatsapp