Home ಟಾಪ್ ಸುದ್ದಿಗಳು ಶಾಲಾ ಕೊಠಡಿಗಳ ನಿರ್ಮಾಣದಲ್ಲೂ ರಾಜಕಾರಣ ಮಾಡುವುದು ಸರಿಯಲ್ಲ : ಮುಖ್ಯಮಂತ್ರಿ ಬೊಮ್ಮಾಯಿ

ಶಾಲಾ ಕೊಠಡಿಗಳ ನಿರ್ಮಾಣದಲ್ಲೂ ರಾಜಕಾರಣ ಮಾಡುವುದು ಸರಿಯಲ್ಲ : ಮುಖ್ಯಮಂತ್ರಿ ಬೊಮ್ಮಾಯಿ

ಕಲಬುರಗಿ : ಕಲಬುರಗಿ ತಾಲೂಕಿನ ಮಡಿಹಾಳ ತಾಂಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಆಯೋಜಿಸಿದ್ದ ವಿವೇಕ ಶಾಲಾ ಕೊಠಡಿಗಳ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇದು ಸದಾ ಕಾಲ ನೆನಪಿಡುವ ದಿನವಾಗಿದೆ. ಮಕ್ಕಳಿಗೆ ಮೂಲ ಸೌಕರ್ಯ ಒದಗಿಸುವ ಮಹತ್ವದ ಕೆಲಸಕ್ಕೆ ನಾವು ಮುಂದಡಿ ಇಟ್ಟಿದ್ದೇವೆ. ಕರ್ನಾಟಕ ಉದಯವಾದ ಮೇಲೆ ಒಂದೇ ವರ್ಷದಲ್ಲಿ ಇಷ್ಟೊಂದು ಕೊಠಡಿ ನಿರ್ಮಿಸುವ ಕೆಲಸ ಎಂದಿಗೂ ನಡೆದಿರಲಿಲ್ಲ. ಆದರೆ, ನಮ್ಮ ಸರ್ಕಾರವು ಒಂದೇ ಬಾರಿಗೆ 7,601 ಕೊಠಡಿ ನಿರ್ಮಿಸಲು ಮುಂದಾಗಿದೆ. ಇದೊಂದು ದಾಖಲೆ ಎಂದರು.

ಮುಂದಿನ ದಿನಗಳಲ್ಲಿ ಎರಡು ಸಾವಿರ ಕೊಠಡಿಗಳನ್ನು ಕಲ್ಯಾಣ ಕರ್ನಾಟಕ ಭಾಗದಲ್ಲಿ ನಿರ್ಮಿಸಲಿದ್ದೇವೆ. ಮುಂದಿನ ಅವಧಿಗೂ ನಮ್ಮದೇ ಸರ್ಕಾರ ಬರುತ್ತದೆ. ನಾಡಿನ ಕಟ್ಟಕಡೆಯ ವ್ಯಕ್ತಿಯ ಮಕ್ಕಳಿಗೂ ಶಿಕ್ಷಣ ಸಿಗುವಂತಾಗಲು ನಾವು ಶ್ರಮಿಸುತ್ತೇವೆ ಎಂದು ಭರವಸೆ ನೀಡಿದರು.

ರಾಜ್ಯದ ಸರ್ಕಾರಿ ಶಾಲಾ ಕೊಠಡಿಗಳಿಗೆ ಕೇಸರಿ ಬಣ್ಣ ಬಳಿಯುವ ವಿಚಾರ ಕುರಿತು ಎದ್ದಿರುವ ವಿವಾದ ಕುರಿತು ಮಾತನಾಡಿದ ಅವರು, ಯಾವುದೇ ಅಭಿವೃದ್ಧಿ ಕಾರ್ಯಕ್ಕೆ ಕೈಹಾಕಿದರೂ ಅದನ್ನು ವಿವಾದವಾಗಿಸಲು ಕೆಲವರು ಯತ್ನಿಸುತ್ತಾರೆ. ಹೀಗೆ ಟೀಕೆ ಮಾಡುವವರಿಗೆ ಅಭಿವೃದ್ಧಿ ಚಟುವಟಿಕೆಗಳು ಬೇಕಿಲ್ಲ. ಶಾಲಾ ಕೊಠಡಿಗಳ ನಿರ್ಮಾಣದಲ್ಲೂ ರಾಜಕಾರಣ ಮಾಡುವುದು ಸರಿಯಲ್ಲ ಎಂದು ಹೇಳಿದರು.

Join Whatsapp
Exit mobile version