Home ಟಾಪ್ ಸುದ್ದಿಗಳು ಟಿಪ್ಪುನನ್ನು ದೇಶ ದ್ರೋಹಿ ಎಂದು ಬಿಂಬಿಸೋದು ಸರಿಯಲ್ಲ: ಸಚಿವ ಹೆಚ್ ಸಿ ಮಹದೇವಪ್ಪ

ಟಿಪ್ಪುನನ್ನು ದೇಶ ದ್ರೋಹಿ ಎಂದು ಬಿಂಬಿಸೋದು ಸರಿಯಲ್ಲ: ಸಚಿವ ಹೆಚ್ ಸಿ ಮಹದೇವಪ್ಪ

ಮೈಸೂರು: ಮೈಸೂರು ವಿಮಾನ ನಿಲ್ದಾಣಕ್ಕೆ ಹೆಸರು ಇಡುವುದು ಬಿಡುವುದು ಬೇರೆ ವಿಚಾರ. ಆದರೆ ಟಿಪ್ಪುನನ್ನು ದೇಶ ದ್ರೋಹಿ ಎಂದು ಬಿಂಬಿಸೋದು ಸರಿಯಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಟಿಪ್ಪು ಸುಲ್ತಾನ್ ನಮ್ಮ ಊರಿನವರೇ ಅಲ್ವಾ, ಅವರೇನು ಹೊರ ದೇಶದವರಾ ಎಂದು ಪ್ರಶ್ನಿಸಿದ್ದಾರೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಗೂ ನಮ್ಮ ತಕರಾರು ಇಲ್ಲ. ಟಿಪ್ಪು ವಿಚಾರದಲ್ಲಿ ಕೆಲವರು ಅಭಿಪ್ರಾಯ ಹೇಳೋದು ಅಪರಾಧವಾ ಎಂದು ಪ್ರಶ್ನಿಸಿದ್ದಾರೆ. ವಿಮಾನ ನಿಲ್ದಾಣ ವಿಚಾರದಲ್ಲಿ ಕ್ಯಾಬಿನೆಟ್ ತೀರ್ಮಾನವಾಗಿದೆ. ಅದನ್ನು ತಿರಸ್ಕರಿಸಲು ಸಾಧ್ಯವಾ ಎಂದಿದ್ದಾರೆ.

Join Whatsapp
Exit mobile version