Home ಕರಾವಳಿ ಸ್ವ ಉದ್ಯೋಗದ ಮೂಲಕ ಆರ್ಥಿಕ ಸ್ವಾವಲಂಬನೆಯೊಂದಿಗೆ ಸದೃಢ ಸಮಾಜ ನಿರ್ಮಾಣ ಸಾಧ್ಯ: ಡಾ.ರಾಜೇಂದ್ರ ಕೆ.ವಿ

ಸ್ವ ಉದ್ಯೋಗದ ಮೂಲಕ ಆರ್ಥಿಕ ಸ್ವಾವಲಂಬನೆಯೊಂದಿಗೆ ಸದೃಢ ಸಮಾಜ ನಿರ್ಮಾಣ ಸಾಧ್ಯ: ಡಾ.ರಾಜೇಂದ್ರ ಕೆ.ವಿ

ಮಂಗಳೂರು: ಆರ್ಥಿಕ ಸ್ವಾವಲಂಬನೆ ಸಾಧಿಸಲು ಸ್ವ ಉದ್ಯೋಗವನ್ನು ಸೂಕ್ತವಾದ ಮಾಹಿತಿಯೊಂದಿಗೆ ಮಾಡುವುದರಿಂದ ಸದೃಢ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಿದಂತಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ತಿಳಿಸಿದರು.


ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೋಟಗಾರಿಕಾ ಇಲಾಖೆ, ಮೀನುಗಾರಿಕಾ ಇಲಾಖೆ ಮತ್ತು ಪಶು ಸಂಗೋಪನಾ ಇಲಾಖೆಯ ಸಹಯೋಗದಲ್ಲಿ ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಹಮ್ಮಿಕೊಂಡಿದ್ದ ಸ್ವ ಉದ್ಯೋಗ ಮಾಹಿತಿ ಶಿಬಿರವನ್ನು ನಗರದ ಬೆಂದೂರ್ ವೆಲ್ ನಲ್ಲಿರುವ ತೋಟಗಾರಿಕಾ ಇಲಾಖೆಯ ಸಭಾಂಗಣದಲ್ಲಿಂದು ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ನಮ್ಮ ಪರಿಸರದಲ್ಲಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಸ್ವ ಉದ್ಯೋಗವನ್ನು ಕೈ ಗೊಂಡು ವೈಯಕ್ತಿಕ ಆದಾಯ ಹೆಚ್ಚು ಮಾಡಿಕೊಂಡು. ಆರ್ಥಿಕವಾಗಿ ಸದೃಢತೆಯನ್ನು ಸಾಧಿಸಬಹುದು. ಕೋವಿಡ್ ಸಂದರ್ಭದಲ್ಲಿ ಸಮಾಜದ ವಿವಿಧ ಕ್ಷೇತ್ರದಲ್ಲಿ ಆಗಿರುವ ಆರ್ಥಿಕ ಹೊಡೆತದಿಂದ ಕಷ್ಟ ನಷ್ಟ ಅನುಭವಿಸಿದವರಿಗೆ ವಿವಿಧ ಕ್ಷೇತ್ರದಲ್ಲಿ ಸ್ವ ಉದ್ಯೋಗ ಕೈ ಗೊಳ್ಳಲು ಪತ್ರ ಕರ್ತರಿಗೆ ಹಾಗೂ ಅವರ ಕುಟುಂಬದ ಸದಸ್ಯರಿಗೆ ಮಾಹಿತಿ ಶಿಬಿರವನ್ನು ಹಮ್ಮಿಕೊಂಡಿರುವುದು ಮಾದರಿಯಾಗಿದೆ ಎಂದು ಅವರು ತಿಳಿಸಿದರು.


ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಮಾತನಾಡಿ, ಸ್ವ ಉದ್ಯೋಗ ಮಾಡಲು ಮೊದಲು ಆಸಕ್ತಿ ಮುಖ್ಯ. ಜೊತೆಗೆ ಆ ಕ್ಷೇತ್ರದ ಮಾಹಿತಿ, ಕೌಶಲ್ಯ, ಸರಕಾರದ ಸಹಾಯವನ್ನು ಪಡೆದು ಕೊಂಡು ಆರ್ಥಿಕ ಸ್ವಾವಲಂಬನೆಯನ್ನು ಸಾಧಿಸಬಹುದು ಎಂದರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಪ್ರಸ್ತಾವಿಕವಾಗಿ ಮಾತನಾಡಿದರು.


ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಎಚ್ ಆರ್.ನಾಯ್ಕ್ , ದ.ಕ ಪಶು ಸಂಗೋಪನಾ ಇಲಾಖಾ ಉಪನಿರ್ದೇಶಕ ಡಾ.ಪ್ರಸನ್ನ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜೀತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಪ್ರವೀಣ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆಯ ಪಾಲಿಸಿಯನ್ನು ರೈತರಿಗೆ ಮತ್ತು ತರಕಾರಿ ಗಿಡಗಳನ್ನು ಪತ್ರಕರ್ತರಿಗೆ ಸಾಂಕೇತಿಕವಾಗಿ ವಿತರಿಸಿಸಲಾಯಿತು.

ಪತ್ರಕರ್ತರಿಗೆ ಹಾಗೂ ಅವರ ಕುಟುಂಬದ ಸದಸ್ಯರಿಗೆ ಸಂಪನ್ಮೂಲ ವ್ಯಕ್ತಿಗಳಿಂದ ಜೇನು ಕೃಷಿ, ಅಣಬೆ ಕೃಷಿ, ಹೈನುಗಾರಿಕೆ, ಕೋಳಿ ಸಾಕಾಣಿಕೆ , ಮೀನುಗಾರಿಕೆ ಬಗ್ಗೆ ಮಾಹಿತಿ ಶಿಬಿರ ನಡೆಯಿತು.

Join Whatsapp
Exit mobile version