ಡ್ರೈವಿಂಗ್ ವೇಳೆ ಫೋನ್‌ ನಲ್ಲಿ ಮಾತನಾಡುವುದು ಶೀಘ್ರವೇ ಕಾನೂನು ಬದ್ಧ : ನಿತಿನ್ ಗಡ್ಕರಿ

Prasthutha|

ನವದೆಹಲಿ : ಡ್ರೈವಿಂಗ್ ವೇಳೆ ಫೋನ್‌ ನಲ್ಲಿ ಮಾತನಾಡುವುದನ್ನು ಶೀಘ್ರದಲ್ಲೇ ಭಾರತದಲ್ಲಿ ಕಾನೂನುಬದ್ಧಗೊಳಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

- Advertisement -

ಈ ಬಗ್ಗೆ  ಲೋಕಸಭೆಯಲ್ಲಿ ಮಾತನಾಡಿದ ಅವರು, ಕಾರು ಚಾಲನೆ ಮಾಡುವಾಗ ಹ್ಯಾಂಡ್ ಫ್ರೀ ಡಿವೈಸ್ ಅಂದರೆ ಬ್ಲೂಟೂತ್, ಇಯರ್‌ ಫೋನ್ ಉಪಯೋಗಿಸಿ ಫೋನ್ ನಲ್ಲಿ ಮಾತನಾಡಿದರೆ ಅದನ್ನು ಅಪರಾಧ ಎಂದು ಪರಿಗಣಿಸಲ್ಲ. ಆದರೆ, ಆಗ ಚಾಲಕ ಫೋನನ್ನು ಕಾರಿನಲ್ಲಿಡದೆ ಜೇಬಲ್ಲಿ ಇಟ್ಟುಕೊಂಡಿರಬೇಕು.

ಇದಕ್ಕೆ ಪೊಲೀಸರು ದಂಡ ವಿಧಿಸಬಾರದು. ಒಂದು ವೇಳೆ ಯಾರಾದ್ರೂ ದಂಡ ವಿಧಿಸಿದರೆ ಇದನ್ನು ಕೋರ್ಟ್ ನಲ್ಲಿ ಪ್ರಶ್ನಿಸಬಹುದು ಎಂದು ಸ್ಪಷ್ಟಪಡಿಸಿದ್ದಾರೆ.

Join Whatsapp