Home ಟಾಪ್ ಸುದ್ದಿಗಳು ಪಕ್ಷದಲ್ಲಿ ಗೊಂದಲ ಇರುವುದು ನಿಜ: ಆರ್.ಅಶೋಕ್

ಪಕ್ಷದಲ್ಲಿ ಗೊಂದಲ ಇರುವುದು ನಿಜ: ಆರ್.ಅಶೋಕ್

ಬೆಂಗಳೂರು: ”ಪಕ್ಷದಲ್ಲಿ ಗೊಂದಲ ಇರುವುದು ನಿಜ. ಅದನ್ನು ಸರಿಪಡಿಸುವ ಕೆಲಸ ಮಾಡಲಾಗುವುದು. ಶ್ರೀರಾಮುಲು ಅವರೊಂದಿಗೆ ನಾನು ಹಾಗೂ ಬಸವರಾಜ ಬೊಮ್ಮಾಯಿ ಚರ್ಚಿಸಲಿದ್ದೇವೆ” ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ನಗರದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ”ನಮ್ಮಲ್ಲಿ ಯಾವುದೇ ಟೀಮ್‌ ಇಲ್ಲ. ನಾನು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ವಿರುದ್ಧ ಯಾವುದೇ ದೂರು ನೀಡಿಲ್ಲ. ಆದರೂ ದೂರು ನೀಡಿದ್ದೇನೆ ಎಂದು ಸುಳ್ಳಾಗಿ ಪತ್ರಿಕೆಯಲ್ಲಿ ಬರೆಯಲಾಗಿದೆ. ಒಕ್ಕಲಿಗರು ಪ್ರತ್ಯೇಕವಾಗಿ ಸಭೆ ಮಾಡಿಲ್ಲ ಅಥವಾ ಗುರುತಿಸಿಕೊಂಡಿಲ್ಲ. ಇದು ಕೂಡ ಸುಳ್ಳು ಸುದ್ದಿ” ಎಂದರು.

”ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಪ್ರಕರಣ ಮುಚ್ಚಿಹಾಕಲು ಲೋಕಾಯುಕ್ತ ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

Join Whatsapp
Exit mobile version