ಕೋವಿಡ್ ಲಸಿಕೆ ಪ್ರಮಾಣಪತ್ರ ವಿತರಣೆಯಲ್ಲಿ ಲೋಪ ಉಂಟಾಗಿದ್ದು ನಿಜ: ತಪ್ಪೊಪ್ಪಿಕೊಂಡ ಕೇಂದ್ರ

Prasthutha|

ನವದೆಹಲಿ: ಕೋವಿಡ್ ಲಸಿಕೆ ಪ್ರಮಾಣಪತ್ರ ವಿತರಣೆಯಲ್ಲಿ ಲೋಪ ಉಂಟಾಗಿದ್ದು ನಿಜ ಎಂದು ಕೇಂದ್ರ ಸರಕಾರ ಲೋಕಸಭೆಗೆ ಮಾಹಿತಿ ನೀಡಿದೆ. ಡಾಟಾ ಎಂಟ್ರಿ ಲೋಪಗಳಿಂದಾಗಿ ಕೆಲವೊಮ್ಮೆ ಹೀಗಾಗುತ್ತಿದೆ ಎಂದು ಸಚಿವಾಲಯ ಹೇಳಿದೆ. ಕೋವಿಡ್ ಲಸಿಕೆ ಪ್ರಮಾಣಪತ್ರಗಳನ್ನು ಕೆಲವೊಮ್ಮೆ ತಪ್ಪಾಗಿ ವಿತರಿಸಿರುವ ಪ್ರಕರಣಗಳು ವರದಿಯಾಗಿರುವುದು ನಿಜ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಪ್ಪೊಪ್ಪಿಕೊಂಡಿದೆ.

- Advertisement -

ಲೋಕಸಭೆಗೆ ಮಾಹಿತಿ ನೀಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಜ್ಯ ಖಾತೆ ಸಚಿವೆ ಭಾರತಿ ಪ್ರವೀಣ್ ಪವಾರ್, ಲಸಿಕೆ ಪಡೆಯದವರಿಗೆ ಮತ್ತು ಮೃತಪಟ್ಟವರ ಹೆಸರಿನಲ್ಲಿ ಪ್ರಮಾಣಪತ್ರ ನೀಡಿದ ಕೆಲವೊಂದು ಉದಾಹರಣೆಗಳಿವೆ ಎಂದು ಹೇಳಿದ್ದಾರೆ.

ಎರಡನೇ ಡೋಸ್ ಲಸಿಕೆ ನೀಡಿಕೆಯ ವೇಳೆ ಸಿಬ್ಬಂದಿಯು ಮಾಡಿರುವ ಲೋಪದಿಂದಾಗಿ ಈ ರೀತಿಯ ಪ್ರಮಾದಗಳಾಗಿವೆ ಎಂದು ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ಲಸಿಕೆ ಪ್ರಮಾಣಪತ್ರ ನೀಡಿಕೆಯಲ್ಲಿನ ಲೋಪಕ್ಕೆ ಸಂಬಂಧಿಸಿ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಅವರು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದರು.

Join Whatsapp