10ಕ್ಕೂ ಹೆಚ್ಚು ಉದ್ಯಮಿಗಳ ಸ್ಥಳಗಳಲ್ಲಿ ಐಟಿ ದಾಳಿ | ಮೆಡಿಕಲ್ ಕಾಲೇಜು ಮಾಲೀಕರ ಮನೆಗಳಲ್ಲಿ ತಪಾಸಣೆ

Prasthutha|

ರಾಜ್ಯದ ಹಲವು ಪ್ರತಿಷ್ಠಿತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. 10ಕ್ಕೂ ಹೆಚ್ಚು ಉದ್ಯಮಿಗಳಿಗೆ ಸೇರಿದ ಮನೆಗಳ ಮೇಲೆ ಐಟಿ ದಾಳಿ ನಡೆದಿದೆ ಎಂದು ವರದಿಗಳು ತಿಳಿಸಿವೆ.

- Advertisement -

ಮಂಗಳೂರಿನ ಎ.ಜೆ.ಶೆಟ್ಟಿ ಆಸ್ಪತ್ರೆ, ಯೆನೆಪೋಯಾ ಆಸ್ಪತ್ರೆ, ಕಣಚೂರು ಆಸ್ಪತ್ರೆ ಹಾಗೂ ಬೆಂಗಳೂರಿ ಬಿಜಿಎಸ್, ದೇವನಹಳ್ಳಿ ಬಳಿ ಇರುವ ಆಕಾಶ್ ಮೆಡಿಕಲ್ ಕಾಲೇಜು ಸೇರಿದಂತೆ ಪ್ರತಿಷ್ಠಿತ ವೈದ್ಯಕೀಯ ಕಾಲೇಜು ಮಾಲೀಕರ ಮನೆ ಮತ್ತು ಆಸ್ಪತ್ರೆಗಳ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸಲಾಗುತ್ತಿದೆ.

ಮಂಗಳೂರಿನ ಬೆಂದೂರು ವೆಲ್ ನಲ್ಲಿರುವ ಎ.ಜೆ.ಆಸ್ಪತ್ರೆಯ ಮಾಲೀಕ ಎ.ಜೆ.ಶೆಟ್ಟಿ ಅವರ ಮನೆ ಹಾಗೂ ಯೆನೆಪೊಯಾ ಆಸ್ಪತ್ರೆಯ ಮಾಲೀಕ ವೈ.ಅಬ್ದುಲ್ಲಾ ಅವರ ಮನೆ ಮೇಲೆ ದಾಳಿ ನಡೆದಿದೆ. ಮಂಗಳೂರಿನ 10ಕ್ಕೂ ಹೆಚ್ಚು ಉದ್ಯಮಿಗಳ ನಿವಾಸ ಹಾಗೂ ಕಚೇರಿ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

- Advertisement -

ಬೆಂಗಳೂರಿನಲ್ಲಿ ದೇವನಹಳ್ಳಿ ಬಳಿ ಇರುವ ಆಕಾಶ್ ಮೆಡಿಕಲ್ ಕಾಲೇಜು, ಬೆಂಗಳೂರು ಹೊರವಲಯದ ಕುಂಬಳಗೋಡು ಸಮೀಪವಿರುವ  ಬಿಜಿಎಸ್ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿಯಾಗಿದೆ. ಬಿಜಿಎಸ್ ಶಿಕ್ಷಣ ಸಂಸ್ಥೆಗಳಲ್ಲಿ ಮೂರು ಕಾರಿನಲ್ಲಿ ಬಂದ 10ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ತುಮಕೂರು ಶಿರಾ ಗೇಟ್ ಬಳಿ ಇರುವ ಸಪ್ತಗಿರಿ ಮೆಡಿಕಲ್ ಕಾಲೇಜು ಮೇಲೆ ಐಟಿ ದಾಳಿಯಾಗಿದ್ದು,  7 ಐಟಿ ಅಧಿಕಾರಿಗಳು ದಾಖಲೆ ಪರಿಶೀಲಿಸುತ್ತಿದ್ದಾರೆ.  ಮಂಗಳೂರಿನ ದೇರಳಕಟ್ಟೆಯಲ್ಲಿರುವ ಕಣಚೂರು ಮೆಡಿಕಲ್ ಕಾಲೇಜು ಮೇಲೂ ಐಟಿ ದಾಳಿಯಾಗಿದೆ. ಕಣಚೂರು ಮೋನು ಮನೆಯಲ್ಲಿ ಐಟಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.  ಬಿಜೆಪಿ ಮುಖಂಡ ಹುಲಿನಾಯ್ಕರ್ ಅವರಿಗೆ ಸೇರಿದ ಶ್ರೀದೇವಿ ಮೆಡಿಕಲ್ ಕಾಲೇಜಿನ ಮೇಲೆ ಕೂಡ ಐಟಿ ದಾಳಿ ನಡೆದಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.



Join Whatsapp