Home ಟಾಪ್ ಸುದ್ದಿಗಳು ಮಂಗಳೂರು | ಯೆನೆಪೋಯ, ಎಜೆ ಆಸ್ಪತ್ರೆ ಮಾಲೀಕರ ಮನೆಗಳ ಮೇಲೆ ಐಟಿ ದಾಳಿ

ಮಂಗಳೂರು | ಯೆನೆಪೋಯ, ಎಜೆ ಆಸ್ಪತ್ರೆ ಮಾಲೀಕರ ಮನೆಗಳ ಮೇಲೆ ಐಟಿ ದಾಳಿ

ಮಂಗಳೂರಿನ ವಿವಿಧ ಉದ್ಯಮಿಗಳ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಶೋಧ ನಡೆಸಿದೆ.

ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಾದ ಎ‌ ಜೆ ಆಸ್ಪತ್ರೆ, ಯೆನೆಪೋಯ ಆಸ್ಪತ್ರೆ ಮಾಲೀಕರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂದೂರ್ ವೆಲ್ ನಲ್ಲಿರುವ ಉದ್ಯಮಿ ಎ‌.ಜೆ. ಶೆಟ್ಟಿ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪತ್ರಗಳನ್ನು  ಪರಿಶೀಲನೆ ಮಾಡುತ್ತಿದ್ದಾರೆ.

ಮಂಗಳೂರು ಮತ್ತು ದೇರಳಕಟ್ಟೆಯಲ್ಲಿರುವ ಯೆನೆಪೋಯ ಆಸ್ಪತ್ರೆಗಳು ಹಾಗೂ ಅದರ ಮಾಲೀಕರ ಮನೆಗಳ ಮೇಲೂ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.

Join Whatsapp
Exit mobile version