ಶಾಸಕ ಜಮೀರ್ ಅಹಮ್ಮದ್ ನಿವಾಸದ ಮೇಲೆ ಐಟಿ ದಾಳಿ!

Prasthutha|

ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಅವರ ಬೆಂಗಳೂರಿನ ಕಂಟೋನ್ಮೆಂಟ್ ಬಳಿ ಇರುವ ನಿವಾಸದ ಮೇಲೆ ಇಂದು ಬೆಳಿಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

- Advertisement -

ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಶಾಸಕರ ನ್ಯಾಷನಲ್ ಟ್ರಾವೆಲ್ಸ್ ಕಚೇರಿ,ಮನೆ ಹಾಗೂ ಫ್ಲಾಟ್ ಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ ಐಟಿ ಅಧಿಕಾರಿಗಳು ಆದಾಯ ವಿವರ, ಹೂಡಿಕೆ, ಆಸ್ತಿ ಮೊದಲಾದ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಿದ್ದಾರೆ.



Join Whatsapp