ಎಸ್​​​​.ಎಂ. ಕೃಷ್ಣ ಸಹೋದರಿ ಮನೆ ಮೇಲೆ ಐಟಿ ದಾಳಿ

Prasthutha|

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ದಿನ ಬಾಕಿ ಇರುವಾಗಲೇ ಕಾಂಗ್ರೆಸ್ ನಾಯಕರ ಮೇಲೆ ಐಟಿ ದಾಳಿ ಮುಂದುವರಿದಿದ್ದು, ಎಸ್​​​​ಎಂ ಕೃಷ್ಣ ಸಹೋದರಿಯ ನಿವಾಸದ ಐಟಿ ದಾಳಿ ನಡೆದಿದೆ.

- Advertisement -

ಬೆಂಗಳೂರಿನ ಕೋರಮಂಗಲದ 1ನೇ ಬ್ಲಾಕ್​ನಲ್ಲಿರುವ ನಿವಾಸ ಎಸ್​.ಎಂ.ಕೃಷ್ಣ ಸಹೋದರಿ ಸುನೀತಾ ಮನೆ ಮೇಲೆ ಐಟಿ ದಾಳಿಯಾಗಿದೆ.

ಬಾಗ್ಮನೆ ಹೆಸರಿನಲ್ಲಿರುವ ನಿವಾಸ ಹಾಗೂ ಬಾಗ್ಮನೆ ಬಿಲ್ಡರ್ ಕಚೇರಿಗಳ ಮೇಲೆ ದಾಳಿ ಮಾಡಲಾಗಿದ್ದು, ಕಳೆದ ಎರಡು ದಿನಗಳಿಂದ ಪರಿಶೀಲನೆ ನಡೆದಿದೆ ಎಂದು ತಿಳಿದುಬಂದಿದೆ.