ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ದಿನ ಬಾಕಿ ಇರುವಾಗಲೇ ಕಾಂಗ್ರೆಸ್ ನಾಯಕರ ಮೇಲೆ ಐಟಿ ದಾಳಿ ಮುಂದುವರಿದಿದ್ದು, ಎಸ್ಎಂ ಕೃಷ್ಣ ಸಹೋದರಿಯ ನಿವಾಸದ ಐಟಿ ದಾಳಿ ನಡೆದಿದೆ.
ಬೆಂಗಳೂರಿನ ಕೋರಮಂಗಲದ 1ನೇ ಬ್ಲಾಕ್ನಲ್ಲಿರುವ ನಿವಾಸ ಎಸ್.ಎಂ.ಕೃಷ್ಣ ಸಹೋದರಿ ಸುನೀತಾ ಮನೆ ಮೇಲೆ ಐಟಿ ದಾಳಿಯಾಗಿದೆ.
ಬಾಗ್ಮನೆ ಹೆಸರಿನಲ್ಲಿರುವ ನಿವಾಸ ಹಾಗೂ ಬಾಗ್ಮನೆ ಬಿಲ್ಡರ್ ಕಚೇರಿಗಳ ಮೇಲೆ ದಾಳಿ ಮಾಡಲಾಗಿದ್ದು, ಕಳೆದ ಎರಡು ದಿನಗಳಿಂದ ಪರಿಶೀಲನೆ ನಡೆದಿದೆ ಎಂದು ತಿಳಿದುಬಂದಿದೆ.