Home ಟಾಪ್ ಸುದ್ದಿಗಳು ಜೆಡಿಎಸ್ ನಾಯಕರ ನಿಯಂತ್ರಣದಲ್ಲಿರುವ ಬ್ಯಾಂಕ್ ಮೇಲೆ IT ದಾಳಿ

ಜೆಡಿಎಸ್ ನಾಯಕರ ನಿಯಂತ್ರಣದಲ್ಲಿರುವ ಬ್ಯಾಂಕ್ ಮೇಲೆ IT ದಾಳಿ

ಹಾಸನ: ಹಾಸನದ ಹೆಚ್ ಡಿಸಿಸಿ ಬ್ಯಾಂಕ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ತಂಡ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದೆ.


ಐಟಿ ಇಲಾಖೆಯ ಸುಮಾರು ಎಂಟು ಸದಸ್ಯರ ತಂಡ ಹಾಸನ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಎಚ್‌ಡಿಸಿಸಿ) ಮೇಲೆ ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ತಮಿಳುನಾಡು ಮತ್ತು ಗೋವಾದ ಐಟಿ ಅಧಿಕಾರಿಗಳು ಗುರುವಾರ ಬೆಳಗ್ಗೆಯಿಂದ ಶೋಧ ಕಾರ್ಯಾಚರಣೆ ಆರಂಭಿಸಿದ್ದು, ಶುಕ್ರವಾರವೂ ಮುಂದುವರಿದಿತ್ತು. ಶೋಧದ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಬ್ಯಾಂಕ್ ಮುಚ್ಚಲಾಗಿತ್ತು.


ಕುತೂಹಲಕಾರಿಯಾಗಿ ಹೆಚ್‌ಡಿಸಿಸಿ ಬ್ಯಾಂಕ್ ನಿಯಂತ್ರಣ ಜೆಡಿಎಸ್ ನಾಯಕರ ಆಳ್ವಿಕೆ ಮತ್ತು ನಿಯಂತ್ರಣದಲ್ಲಿದೆ ಎಂದು ಹೇಳಲಾಗಿದೆ. ಹೆಚ್‌ಡಿಸಿಸಿ ಬ್ಯಾಂಕ್ ಮೇಲೆ ಐಟಿ ದಾಳಿ ನಡೆದಿರುವುದು ಹಾಸನ ಇತಿಹಾಸದಲ್ಲೇ ಮೊದಲು ಎನ್ನಲಾಗಿದೆ.

Join Whatsapp
Exit mobile version