ಚಂಡೀಗಢ: ಹೀರೋ ಮೋಟೋಕಾರ್ಪ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಪವನ್ ಮುಂಜಾಲ್ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ.
ಪವನ್ ಮುಂಜಾಲ್ ಅವರ ಗುರುಗ್ರಾಮದಲ್ಲಿರುವ ಕಚೇರಿ ಹಾಗೂ ನಿವಾಸದ ಮೇಲೆ ದಾಳಿ ನಡೆಸಿದೆ. ಐಟಿ ಅಧಿಕಾರಿಗಳು ಕಂಪನಿಗೆ ಸಂಬಂಧಿಸಿದ ದಾಖಲೆಗಳ ಹುಡುಕಾಟ ನಡೆಸುತ್ತಿದ್ದಾರೆ ಎಂದು ಸುದ್ದಿ ಮೂಲಗಳು ತಿಳಿಸಿವೆ.
ಪವನ್ ಮುಂಜಾಲ್ ದ್ವಿಚಕ್ರ ವಾಹನ ತಯಾರಿಕಾ ಕಂಪನಿ ಹೀರೋ ಮೋಟೋಕಾರ್ಪ್ ನ ಅಧ್ಯಕ್ಷರಾಗಿದ್ದು ಏಷ್ಯಾ, ಆಫ್ರಿಕಾ, ದಕ್ಷಿಣ ಅಮೆರಿಕ ಹಾಗೂ ಮಧ್ಯ ಅಮೆರಿಕದ 40 ದೇಶಗಳಲ್ಲಿ ವಹಿವಾಟು ನಡೆಸುತ್ತಿದ್ದಾರೆ.