ಬೆಂಗಳೂರು: ರಾಜಧಾನಿ ಬೆಂಗಳೂರು ಮತ್ತು ಮೈಸೂರಿನ ಹಲವು ಸ್ಥಳಗಳಲ್ಲಿ ಐಟಿ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದು, ಸುಮಾರು 20 ಕೋಟಿ ಹಣ ವಶಕ್ಕೆ ಪಡೆದಿದ್ದಾರೆ.
ವಿಧಾನಸಭಾ ಚುನಾವಣಾಗೆ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಫಂಡ್ ಮಾಡುತ್ತಿದ್ದ ಫೈನಾನ್ಸಿಯರ್ ಗಳ ಮನೆ ಮೇಲೆ ಐಟಿ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ಕೆಲವು ಫೈನಾನ್ಸಿಯರ್ ಗಳು ಬೇನಾಮಿಗಳಾಗಿರುವ ಹಿನ್ನೆಲೆಯಲ್ಲಿ ಏಕಕಾಲಕ್ಕೆ ದಾಳಿ ನಡೆದಿದೆ.
ಬೆಂಗಳೂರು, ಮೈಸೂರು ಭಾಗದಲ್ಲಿ ದಾಳಿ ನಡೆದಿದ್ದು, 15 ಕೋಟಿ ರೂ.ಗಿಂತಲೂ ಹೆಚ್ಚಿನ ಪ್ರಮಾಣದ ನಗದು ಹಾಗೂ 5 ಕೋಟಿ ಬೆಲೆಬಾಳುವ ಚಿನ್ನಾಭರಣ ಜಪ್ತಿ ಮಾಡಲಾಗಿದೆ.