Home ಟಾಪ್ ಸುದ್ದಿಗಳು ಮಣಿಪಾಲ್ ಸಮೂಹ ಸಂಸ್ಥೆಗಳ ಮೇಲೆ IT ದಾಳಿ

ಮಣಿಪಾಲ್ ಸಮೂಹ ಸಂಸ್ಥೆಗಳ ಮೇಲೆ IT ದಾಳಿ

ಬೆಂಗಳೂರು: ಮಣಿಪಾಲ್ ಸಮೂಹ ಸಂಸ್ಥೆಗಳ ಮೇಲೆ ದಾಳಿ ನಡೆಸಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಖಲೆ ಪತ್ರಗಳನ್ನು ಪರಿಶೀಲಿಸಿದ್ದಾರೆ.


ಆಸ್ಪತ್ರೆ ಹಾಗೂ ಕಚೇರಿ ಸೇರಿದಂತೆ ಹಲವೆಡೆ ತೆರಿಗೆ ಅಧಿಕಾರಿಗಳಿಂದ ದಾಳಿ ನಡೆದಿದೆ.


ನಾಲ್ಕು ಇನ್ನೋವಾ ವಾಹನದಲ್ಲಿ ಆಗಮಿಸಿರುವ ಅಧಿಕಾರಿಗಳು ಹೈಗ್ರೌಂಡ್ಸ್ ಪೊಲೀಸ್ ಠಾಣೆ ಬಳಿ ಇರುವ ಮಣಿಪಾಲ್ ಆಸ್ಪತ್ರೆಗೆ ದಾಳಿ ನಡೆಸಿದ್ದಾರೆ. ಬೆಳಗಿನ ಜಾವ 6 ಗಂಟೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.


200 ಕ್ಕೂ ಹೆಚ್ಚು ಐಟಿ ಅಧಿಕಾರಿಗಳಿಂದ ಒಟ್ಟು 20 ಕಡೆಗಳಲ್ಲಿ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ.

Join Whatsapp
Exit mobile version