ಬೆಂಗಳೂರಿನ ಸ್ಕೈನೆಟ್ ಎಲೆಕ್ಟ್ರಾನಿಕ್ ಕಂಪನಿ ಮೇಲೆ ಐಟಿ ದಾಳಿ ಪರಿಶೀಲನೆ

Prasthutha: December 22, 2021

ಬೆಂಗಳೂರು: ನಗರದ ಸ್ಕೈನೆಟ್ ಎಲೆಕ್ಟ್ರಾನಿಕ್ ಪ್ರೈವೇಟ್ ಲಿಮಿಟೆಡ್ ಮೇಲೆ ನಿನ್ನೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ವಶಪಡಿಸಿಕೊಂಡ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಿದ್ದಾರೆ.

ನಗರದ ಎಂಜಿ ರಸ್ತೆಯಲ್ಲಿರುವ ಸ್ಕೈನೆಟ್ ಎಲೆಕ್ಟ್ರಾನಿಕ್ ಪ್ರೈವೇಟ್ ಲಿಮಿಟೆಡ್ ಕಂಪನಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿ ವಶಪಡಿಸಿಕೊಂಡ ದಾಖಲೆ ಪತ್ರಗಳ ಪರಿಶೀಲನೆ ನಡೆಸಲಾಗಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ಆದಾಯ ತೆರಿಗೆ ವಂಚನೆ ಹಿನ್ನೆಲೆಯಲ್ಲಿ ದೆಹಲಿ ವಲಯದ ಐವರು ಐಟಿ ಅಧಿಕಾರಿಗಳು ಬೆಳಗ್ಗೆ 6 ಗಂಟೆಯ ವೇಳೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಸ್ಕೈನೆಟ್ ವಿವಿಧ ಎಲೆಕ್ಟ್ರಾನಿಕ್ ಉಪಕರಣಗಳ ವಿತರಕ ಕಂಪನಿಯಾಗಿದೆ.

ಬೆಂಗಳೂರು ಮಾತ್ರವಲ್ಲದೇ ಲಖನೌ ಸೇರಿದಂತೆ 30 ಕಡೆ ದಾಳಿ ನಡೆಸಲಾಗಿದೆ. ಲಖನೌ, ಮೈನ್ ಪುರಿ, ಕೋಲ್ಕತ್ತಾ, ಬೆಂಗಳೂರು ಸೇರಿದಂತೆ 30 ಕಡೆ ಅಧಿಕಾರಿಗಳು ದಾಳಿ ನಡೆಸಿ ಶೋಧಕಾರ್ಯ ಮುಂದುವರಿಸಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!