ಮಹಾರಾಷ್ಟ್ರ ಉಪಮುಖ್ಯಮಂತ್ರಿಗೆ ಐಟಿ ಶಾಕ್ : 1000 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

Prasthutha|

ಮುಂಬೈ : ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಹಾಗೂ ಎನ್‌ಸಿಪಿಯ ಹಿರಿಯ ನಾಯಕ ಅಜಿತ್ ಪವಾರ್ ಅವರಿಗೆ ನೋಟೀಸ್ ನೀಡಿದ್ದು ನೋಟಿಸ್ ಜಾರಿ ಮಾಡಿದ್ದು, ಸುಮಾರು 1000 ಕೋಟಿ ರೂಪಾಯಿ ಮೌಲ್ಯದ ಹಲವು ಬೇನಾಮಿ ಆಸ್ತಿಗಳನ್ನು ಜಪ್ತಿ ಮಾಡಿದೆ.

- Advertisement -

1000 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಅಜಿತ್ ಪವಾರ್ ಮತ್ತು ಅವರ ಕುಟುಂಬಕ್ಕೆ ಸೇರಿದ್ದು ಎಂದು ಐಟಿ ಅಧಿಕಾರಿಗಳು ತಿಳಿಸಿದ್ದಾರೆ. ಅಜಿತ್ ಪವಾರ್ ಅವರು ಬೇನಾಮಿ (ಬಹಿರಂಗಪಡಿಸದ ಮತ್ತು ಕಾನೂನುಬಾಹಿರ) ಹಣವನ್ನು ಬಳಸಿಕೊಂಡು ಆಸ್ತಿಗಳನ್ನು ಮಾಡಿಲ್ಲ ಎಂದು ನಿರೂಪಿಸಲು 90 ದಿನಗಳ ಕಾಲಾವಕಾಶವಿದೆ. ಐಟಿ ಇಲಾಖೆ ತನ್ನ ತನಿಖೆಯನ್ನು ಪೂರ್ಣಗೊಳಿಸುವವರೆಗೆ ಯಾವುದೇ ಆಸ್ತಿಯನ್ನು ಮಾರಾಟ ಮಾಡಲು ಸಾಧ್ಯವಿಲ್ಲ.

ದಕ್ಷಿಣ ದೆಹಲಿಯಲ್ಲಿರುವ 20 ಕೋಟಿ ರೂಪಾಯಿ ಮೌಲ್ಯದ ಫ್ಲ್ಯಾಟ್, ಅಜಿತ್ ಪವಾರ್ ಪುತ್ರ ಪಾರ್ಥ ಅವರಿಗೆ ಸೇರಿದ, ನಿರ್ಮಲ್ ಹೌಸ್ನಲ್ಲಿರುವ ಸುಮಾರು 25 ಕೋಟಿ ರೂ.ಬೆಲೆಯ ಕಚೇರಿ, ಜರಂದೇಶ್ವರದಲ್ಲಿ ಇರುವ ಸುಮಾರು 600 ಕೋಟಿ ರೂ.ಮೌಲ್ಯದ ಸಕ್ಕರೆ ಕಾರ್ಖಾನೆ, 250 ಕೋಟಿ ರೂ.ಬೆಲೆಯ ಗೋವಾದಲ್ಲಿರುವ ಒಂದು ರೆಸಾರ್ಟ್ಗಳನ್ನು ಬೇನಾಮಿ ಆಸ್ತಿಯೆಂದು ಪರಿಗಣಿಸಿ ಆದಾಯ ತೆರಿಗೆ ಇಲಾಖೆ ಮುಟ್ಟುಗೋಲು ಹಾಕಿಕೊಂಡಿದೆ.

Join Whatsapp