ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ತಪ್ಪು ಆದರೆ… : ಪ್ರತಾಪ್ ಸಿಂಹ

Prasthutha|

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿರುವುದು ಸರಿಯಲ್ಲ. ಆದರೆ, ಇಂತಹ ಘಟನೆ ನಡೆಯಲು ಕಾರಣವೇನು ಎಂದು ಸಿದ್ದರಾಮಯ್ಯ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

- Advertisement -

ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಡಿಕೇರಿಯಲ್ಲಿ ಸಿದ್ದರಾಮಯ್ಯ ‌ಕಾರಿಗೆ ಬಿಜೆಪಿ ಕಾರ್ಯಕರ್ತರಿಂದ ಮೊಟ್ಟೆ ಎಸೆತ ವಿಚಾರ ನನ್ನ ಗಮನಕ್ಕೆ ಬಂದಿದೆ. ಇವತ್ತು ಮೊಟ್ಟೆ ಬಿಸಾಡಲು ಕಾರಣ ಏನು ಅಂತಾ ಸಿದ್ದರಾಮಯ್ಯ ಆತ್ಮಾವಲೋಕನ ಮಾಡಿಕೊಳ್ಳಬೇಕು. ಟಿಪ್ಪು ಜಯಂತಿ ಮಾಡಿ ಎಂದು ಯಾರು ಕೇಳಿಕೊಂಡರು?, ಟಿಪ್ಪು ಬಗ್ಗೆ ಕೊಡಗಿನಲ್ಲಿ ಯಾವ ಅಭಿಪ್ರಾಯ ಇದೆ ಎಂದು ಸಿದ್ದರಾಮಯ್ಯಗೆ ಗೊತ್ತಿಲ್ವಾ ಎಂದು ಪ್ರಶ್ನಿಸಿದ್ದಾರೆ.

Join Whatsapp