ಜನತಾ ದಳದ ಹೆಸರನ್ನು ಕಮಲ ದಳ ಎಂದು ಬದಲಿಸಿಕೊಂಡರೆ ಒಳಿತು: ಕಾಂಗ್ರೆಸ್

Prasthutha|

ಬೆಂಗಳೂರು: ಜನತಾ ದಳ ಎಂಬ ಹೆಸರನ್ನು ಕಮಲ ದಳ ಎಂದು ಬದಲಿಸಿಕೊಂಡರೆ ಒಳಿತು ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ವ್ಯಂಗ್ಯವಾಡಿದೆ.

- Advertisement -


ಈ ಬಗ್ಗೆ ಟ್ವೀಟ್ ಮಾಡಿದ ಕಾಂಗ್ರೆಸ್, ಚುನಾವಣೆಯಲ್ಲಿ ಸೋತರೆ ಪಕ್ಷ ವಿಸರ್ಜಿಸುತ್ತೇನೆ ಎಂದಿದ್ದರು, ಆದರೆ ಈಗ “ಜಾತ್ಯಾತೀತತೆ”ಯನ್ನು ವಿಸರ್ಜಿಸಲು ಹೊರಟಿದ್ದಾರೆ. ಜನತಾ ದಳ ಎಂಬ ಹೆಸರನ್ನು “ಕಮಲ ದಳ” ಎಂದು ಬದಲಿಸಿಕೊಂಡರೆ ಒಳಿತು” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.


“ಇತ್ತ ಬಿಜೆಪಿ ಜೆಡಿಎಸ್ ಪಕ್ಷವನ್ನು ಫ್ಯಾಮಿಲಿ ಪಾರ್ಟಿ ಟೀಕಿಸುತ್ತಿತ್ತು, ಈಗ ಅದೇ ಫ್ಯಾಮಿಲಿಗೆ ನಾಲ್ಕು ಸೀಟು ಬಿಟ್ಟು ಹೊಂದಾಣಿಕೆ ಮಾಡಿಕೊಳ್ಳುತ್ತಿರುವುದು ನಾಚಿಕೆಗೇಡು ಅಲ್ಲವೇ” ಎಂದು ಬಿಜೆಪಿ ಪಕ್ಷಕ್ಕೆ ಕಾಂಗ್ರೆಸ್ ಟಾಂಗ್ ನೀಡಿದೆ.

- Advertisement -


“ಬಿಜೆಪಿ ಜೆಡಿಎಸ್ ಮೈತ್ರಿ ಹೇಗಿದೆ ಅಂದರೆ ನಡು ನೀರಲ್ಲಿ ಮುಳುಗುತ್ತಿರುವ ಇಬ್ಬರು ಒಬ್ಬರನೊಬ್ಬರು ಕೈ ಹಿಡಿದು ಆಸರೆ ಪಡೆಯುವಂತೆ..! ಪರಸ್ಪರ ಕೈ ಹಿಡಿದು ಇಬ್ಬರೂ ಮುಳುಗಿ ತಳ ಸೇರುವುದು ಖಂಡಿತ. ಮುಳುಗುವವರು ಹುಲ್ಲು ಕಡ್ಡಿಯ ಆಸರೆಯನ್ನಾದರೂ ಪಡೆಯಬೇಕು, ಅದು ಬಿಟ್ಟು ಮತ್ತೊಬ್ಬ ಮುಳುಗುತ್ತಿರುವವರ ಆಸರೆ ಪಡೆದರೆ ಬದುಕಲು ಸಾಧ್ಯವೇ?!” ಎಂದು ಟ್ವೀಟ್ ಮಾಡಿದೆ.

Join Whatsapp