ಮೈಸೂರು: ಲೋಕಸಭೆ ಚುನಾವಣೆಯಲ್ಲಿ ಮಾಜಿ ಶಾಸಕ ಡಾ. ಯತೀಂದ್ರ ಎದುರಾಳಿಯಾದರೆ ಒಳ್ಳೆಯದು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಮೈಸೂರು-ಕೊಡಗು ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸ್ಪರ್ಧಿಸುವ ಸಾಧ್ಯತೆ ಇದೆ ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯಿಸಿದ ಸಂಸದ, ಲೋಕಸಭೆ ಚುನಾವಣೆಯಲ್ಲಿ ಅವರು ಎದುರಾಳಿಯಾದರೆ ಒಳ್ಳೆಯದು. ಯತೀಂದ್ರ ಸ್ಪರ್ಧೆ ಮಾಡಿದರೆ ಸಿಎಂ ಪುತ್ರ – ಪತ್ರಕರ್ತನ ನಡುವೆ ಫೈಟ್ ನಡೆಯುತ್ತದೆ. ಯಾವತ್ತೂ ಎದುರಾಳಿಯ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಎದುರು ಯಾವ ಎದುರಾಳಿಯ ಹೆಸರು ಕೂಡ ನಡೆಯುವುದಿಲ್ಲ ಎಂದು ಹೇಳಿದರು.