Home ಟಾಪ್ ಸುದ್ದಿಗಳು ಕೇಂದ್ರ ಸರ್ಕಾರ ಕೊಡುವ ಅಕ್ಕಿಯಲ್ಲೂ ಕಡಿತ: ಅನ್ನಭಾಗ್ಯವಲ್ಲ ಇದು ಕನ್ನ ಭಾಗ್ಯ ಎಂದ ಬೊಮ್ಮಾಯಿ

ಕೇಂದ್ರ ಸರ್ಕಾರ ಕೊಡುವ ಅಕ್ಕಿಯಲ್ಲೂ ಕಡಿತ: ಅನ್ನಭಾಗ್ಯವಲ್ಲ ಇದು ಕನ್ನ ಭಾಗ್ಯ ಎಂದ ಬೊಮ್ಮಾಯಿ

ಬೆಂಗಳೂರು: ಕೇಂದ್ರ ಕೊಡುವ ಅಕ್ಕಿಯಲ್ಲೂ ಕಾಂಗ್ರೆಸ್ ಸರ್ಕಾರ 2 ಕೆಜಿ ಅಕ್ಕಿಯನ್ನು ಕಡಿತಗೊಳಿಸಿದೆ ಎಂದು ಮಾಜಿ ಸಿಎಂ ಬೊಮ್ಮಾಯಿ ಆರೋಪಿಸಿದ್ದಾರೆ.


ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆಯಲ್ಲಿ ಅಕ್ಕಿ ಕಡಿತ ಮಾಡಲಾಗಿದೆ. ಕಾಂಗ್ರೆಸ್ ಗ್ಯಾರಂಟಿಗಳ ಹೆಸರಿನಲ್ಲಿ ಜನರಿಗೆ ದೋಖಾ ಮಾಡಿದೆ. ಇದು ಅನ್ನಭಾಗ್ಯ ಯೋಜನೆಯಲ್ಲ, ಕನ್ನ ಭಾಗ್ಯ ಎಂದು ವ್ಯಂಗ್ಯ ಮಾಡಿದ್ದಾರೆ.


ಮಾಜಿ ಸಿಎಂ ಕುಮಾರಸ್ವಾಮಿಯವರು ವರ್ಗಾವಣೆ ವಿಚಾರವಾಗಿ ರೇಟ್ ಫಿಕ್ಸ್ ದಾಖಲೆ ಕೊಟ್ಟಿದ್ದಾರೆ. ಅದಕ್ಕೂ ಮುಂಚೆಯೇ ನಾನು ಈ ವಿಚಾರ ಪ್ರಸ್ತಾಪಿಸಿದ್ದೆ. ಎಲ್.ಹೆಚ್, ವಿಧಾನಸೌಧ, ಕೆಕೆ ಗೆಸ್ಟ್ ಹೌಸ್ನಲ್ಲಿ ಜನರ ದಂಡು ಸೇರುತ್ತಿದೆ ಎಂದಿದ್ದೆ. ಈಗ ಅವರು ಒಂದು ಇಲಾಖೆಯ ದರ ಪಟ್ಟಿಯನ್ನೇ ಕೊಟ್ಟಿದ್ದಾರೆ. ಈ ಬಗ್ಗೆ ಸರ್ಕಾರ ಸ್ಪಷ್ಟನೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

Join Whatsapp
Exit mobile version