ಹಾಸನ: ರಾಜ್ಯಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಅವರು ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುವವರಿಗೆ ಹಾಗೂ ಕಾನೂನು ಬಾಹಿರ ಚಟುವಟಿಕೆ ನಡೆಸುವ ರೌಡಿಗಳಿಗೆ ತಲೆಬಾಗಿ ಕೈಮುಗಿದಿದ್ದಾರೆ. ಇದು ನಾಚಿಗೇಡಿನ ಸಂಗತಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕುಟುಕಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೌಡಿಗಳಿಗೆ ಕೈ ಮುಗಿಯುವ ದೃಶ್ಯ ನೋಡಿದಾಗ ಕರ್ನಾಟಕದಲ್ಲಿ ಬಿಜೆಪಿಯ ಪರಿಸ್ಥಿತಿ ಯಾವ ದಯನೀಯ ಸ್ಥಿತಿಗೆ ಬಂದಿದೆ ಅನ್ನೋದು ಗೊತ್ತಾಗಿದೆ. ಇದು ನಾಚಿಗೇಡಿನ ಸಂಗತಿ ಎಂದರು.