Home ಟಾಪ್ ಸುದ್ದಿಗಳು ಎನ್ಕೌಂಟರ್ ನಡೆಸಲು ಸೂಕ್ತ ಸಮಯ: ಅಶ್ವಥ್ ನಾರಾಯಣ್ ವಿವಾದಾತ್ಮಕ ಹೇಳಿಕೆ

ಎನ್ಕೌಂಟರ್ ನಡೆಸಲು ಸೂಕ್ತ ಸಮಯ: ಅಶ್ವಥ್ ನಾರಾಯಣ್ ವಿವಾದಾತ್ಮಕ ಹೇಳಿಕೆ

ಬೆಂಗಳೂರು: ಕೋಮು ಮತ್ತು ರಾಜಕೀಯ ಹತ್ಯೆಗಳನ್ನು ತಡೆಯಲು ಆರೋಪಿಗಳನ್ನು ಎನ್ ಕೌಂಟರ್ ನಡೆಸಲು ಸೂಕ್ತ ಸಮಯ ಬಂದಿದೆ ಎಂದು ಕರ್ನಾಟಕ ಸರ್ಕಾರ ಐಟಿ ಮತ್ತು ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವಥ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಯಾವುದೇ ಬೆಲೆ ತೆತ್ತಾದರೂ ಈ ಬೆಳವಣಿಗೆಯನ್ನು ತಡೆಯುವ ನಿಟ್ಟಿನಲ್ಲಿ ಕೊಲೆಗಾರರಿಗೆ ಸ್ಪಷ್ಟ ಸಂದೇಶವನ್ನು ಕಳುಹಿಸುತ್ತಿದೆ. ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು. ಎನ್ ಕೌಂಟರ್ ನಡೆಸಲು ನಾವು ಸಿದ್ದರಿದ್ದೇವೆ ಎಂದು ತಿಳಿಸಿದರು.

ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ಬಿಜೆಪಿ ಸರ್ಕಾರದ ವಿರುದ್ಧ ತಮ್ಮದೇ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದ ಹಿನ್ನೆಲೆಯಲ್ಲಿ ಅಶ್ವಥ್ ನಾರಾಯಣ್ ಅವರಿಂದ ಈ ಹೇಳಿಕೆ ಹೊರಬಿದ್ದಿದೆ.

ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ ಅವರು, ಇಂತಹ ಪ್ರಕರಣಗಳಲ್ಲಿ ಭಾಗಿಯಾದವರನ್ನು ಪೊಲೀಸ್ ಇಲಾಖೆ ಬಂಧಿಸಿದೆ. ಗೃಹ ಇಲಾಖೆ ಮತ್ತು ಸರ್ಕಾರ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ನಾವು ಜನರ ಭಾವನೆಗಳನ್ನು ಗೌರವಿಸುತ್ತೇವೆ ಎಂದು ತಿಳಿಸಿದರು.

Join Whatsapp
Exit mobile version