ಮಾಸ್ಕ್ ಧರಿಸುವುದು ಬಿಡುವುದು ಅವರವರ ಭಾವಕ್ಕೆ ಬಿಟ್ಟ ವಿಚಾರ: ಅದಕ್ಕೆ ನಾನು ಮಾಸ್ಕ್ ಧರಿಸುತ್ತಿಲ್ಲ ಎಂದ ಉಮೇಶ್ ಕತ್ತಿ

Prasthutha|

ಬೆಳಗಾವಿ: ಕೊರೊನಾ ಸೋಂಕು ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಧರಿಸುವುದು ಬಿಡುವುದು ಅವರವರ ವೈಯಕ್ತಿಕ ವಿಚಾರ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಆದ್ದರಿಂದ ನಾನು ಮಾಸ್ಕ್ ಧರಿಸಲ್ಲ ಎಂದು ಆಹಾರ ಇಲಾಖೆ ಮತ್ತು ಅರಣ್ಯ ಇಲಾಖೆ ಸಚಿವ ಉಮೇಶ್‌ ಕತ್ತಿ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.

- Advertisement -

ಅಥಣಿ ಪಟ್ಟಣದಲ್ಲಿ ಲಕ್ಷ್ಮೀ ಸಸ್ಯೋದ್ಯಾನ ಉದ್ಘಾಟನೆ ನೆರವೇರಿಸಿ ಮಾತನಾಡಿದರು, ಕೇಂದ್ರ ಸರ್ಕಾರ ಕೊರೊನಾ ನಿಯಮಗಳಲ್ಲಿ ಕೆಲವನ್ನು ಸಡಿಲಿಕೆ ಮಾಡಲಾಗಿದೆ. ಕಳೆದ ಎರಡು ದಿನದ ಹಿಂದೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಮಾಸ್ಕ್ ಧರಿಸುವುದು ಬಿಡುವುದು ಅವರವರ ಭಾವಕ್ಕೆ ಬಿಟ್ಟಿದ್ದು ಎಂದು ಹೇಳಿದ್ದಾರೆ. ಅದಕ್ಕೆ, ನಾನು ಮಾಸ್ಕ್ ಧರಿಸುತ್ತಿಲ್ಲ ಎಂದು ಪ್ರತಿಕ್ರಿಯೆ ನೀಡಿದರು.

ಬೆಳಗಾವಿ ವಿಸ್ತಾರವಾದ ಜಿಲ್ಲೆಯಾಗಿದೆ. ಇದರಲ್ಲಿ ಇನ್ನು ಮೂರು ಪ್ರತ್ಯೇಕ ಜಿಲ್ಲೆಯಾಗಬೇಕು. ಅದು ಪ್ರಗತಿಯಲ್ಲಿದೆ ಇಷ್ಟರಲ್ಲಿ ಕಾರ್ಯಗತ ಆಗುತ್ತದೆ ಎಂದು ತಿಳಿಸಿದರು. ರೈತರು ಶ್ರೀಗಂಧ ಬೆಳೆಯುವುದಕ್ಕೆ ಅರಣ್ಯ ಇಲಾಖೆಯಿಂದ ಕೆಲವು ನಿಯಮಗಳನ್ನು ಸಡಿಲ ಮಾಡಲಾಗಿದೆ. ಶ್ರೀಗಂಧ ಬೆಳೆಯಲಿಕ್ಕೆ ರೈತರಿಗೆ ಯಾವುದೇ ತೊಂದರೆಯಾಗದಂತೆ ತೋಟಗಾರಿಕೆ ಇಲಾಖೆಯ ಅದೀನದಲ್ಲಿ ತರಬೇಕೆಂದು ಅರಣ್ಯ ಇಲಾಖೆ ಯೋಜನೆಯನ್ನು ರೂಪಿಸಿದೆ, ಇದರಿಂದ ಮತ್ತಷ್ಟು ರೈತರಿಗೆ ಅನುಕೂಲವಾಗುತ್ತದೆ ಎಂದರು.

Join Whatsapp