2ನೇ ಬಾರಿಗೆ ವಿಧಾನ ಪರಿಷತ್‌ ಸದಸ್ಯರಾದ ಐವನ್ ಡಿಸೋಜ: ಕಾಂಗ್ರೆಸ್‌ ಕಚೇರಿಯಲ್ಲಿ ಅಭಿನಂದನಾ ಕಾರ್ಯಕ್ರಮ

Prasthutha|

ಮಂಗಳೂರು: 2ನೇ ಬಾರಿಗೆ ವಿಧಾನ ಪರಿಷತ್‌ ಸದಸ್ಯರಾಗಿ ಆಯ್ಕೆಯಾದ ಐವನ್ ಡಿಸೋಜ ಅವರಿಗೆ ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು.

- Advertisement -

ಚೆಂಡೆ, ವಾದ್ಯಗಳೊಂದಿಗೆ ಪಕ್ಷದ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ಅಭಯಚಂದ್ರಜೈನ್, ಮಾಜಿ ಶಾಸಕ ಜೆ.ಆ‌ರ್. ಲೋಬೋ ಸೇರಿದಂತೆ ಹಿರಿಯ ನಾಯಕರು ಹಾಗೂ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದರು.

ಬಳಿಕ ಕಚೇರಿಯ ಸಭಾಂಗಣದಲ್ಲಿ ಸಭೆ ನಡೆಸಿದ ಐವನ್ ಡಿಸೋಜ, ನಾಯಕರು ಹಾಗೂ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.

Join Whatsapp
Exit mobile version