ಮಂಗಳೂರು: ಐವನ್ ಡಿಸೋಜ ಒಬ್ಬ ಮೆಂಟಲ್ ಗಿರಾಕಿ. ಬಾಯಿಗೆ ಬಂದ ಹಾಗೆ ಮಾತನಾಡುತ್ತಾನೆ ಎಂದು ಮಂಗಳೂರು ಉತ್ತರ ಶಾಸಕ ಡಾ.ವೈ.ಭರತ್ ಶೆಟ್ಟಿ ಹೇಳಿದ್ದಾರೆ.
ಮುಡಾ , ವಾಲ್ಮೀಖಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ರಾಜೀನಾಮೆಗೆ ಆಗ್ರಹಿಸಿ ನಡೆದ ಬಿಜೆಪಿ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಐವನ್ ನನ್ನನ್ನು ಏನು ಮಾಡುತ್ತಾನೋ ಗೊತ್ತಿಲ್ಲ. ಹೆಲ್ಮೆಟ್ ಹಾಕಿದ ಇಬ್ಬರು ಐವನ್ ಮನೆ ಮೇಲೆ ಕಲ್ಲೂ ತೂರಾಟ ನಡೆಸಿದ್ದಾರೆ. ಇದನ್ನೂ ಇವನ ಹುಡುಗರಿಂದಲೇ ಮಾಡಿಸಿರಬಹುದು. ಇದಕ್ಕೂ ಆ ಇಬ್ಬರು ನಾನು ಹಾಗೂ ವೇದವ್ಯಾಸ್ ಕಾಮತ್ ಎಂದು ಕೇಸ್ ಹಾಕುತ್ತಾರೋ ಗೊತ್ತಿಲ್ಲ. ನಮ್ಮ ಮೇಲೆ ಸಾಕಷ್ಟು ಕೇಸ್ ಹಾಕಿದ್ದಾರೆ. ಇನ್ನೂ ರೌಡಿ ಶೀಟರ್ ಆಗಬಹುದೇನೋ ಗೊತ್ತಿಲ್ಲ ಎಂದರು.
ಐವನ್ ರಾಜ್ಯಪಾಲರ ಮನೆಗೆ ನುಗ್ಗಿ ಹೊಡೆಯುತ್ತೇವೆ, ಓಡಿಸುತ್ತೇವೆ ಎಂದು ಹೇಳಿದರು. ಅವರ ಮೇಲೆ ಕೇಸ್ ಹಾಕಲು ಪೊಲೀಸರು ಹಿಂದೆ ಮುಂದೆ ನೋಡುತ್ತಾರೆ. ಸರ್ಕಾರ ಇದೆ ಎಂಬ ಕಾರಣಕ್ಕೆ ಪೋಲೀಸರು ನಿಮ್ಮ ಆತ್ಮ ಸಾಕ್ಷಿಯಾಗಿ ಸರಿಯಾಗಿ ಕೆಲಸ ಮಾಡಿ ಎಂದರು.