ರಾಹುಲ್ ಗಾಂಧಿ ಅವರ ಟ್ವಿಟ್ಟರ್ ಖಾತೆ ಸ್ಥಗಿತಗೊಳಿಸಿರುವುದನ್ನು ಖಂಡಿಸಿ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ

Prasthutha|

ಬೆಂಗಳೂರು: ದೆಹಲಿಯಲ್ಲಿ ಅತ್ಯಾಚಾರಕ್ಕೆ ಒಳಗಾದ ದಲಿತ ಬಾಲಕಿಯ ಪೋಷಕರಿಗೆ ಸಾಂತ್ವನ ಹೇಳುವ ಚಿತ್ರ ಪ್ರಕಟಿಸಿದ ಕಾರಣಕ್ಕಾಗಿ ಕಾಂಗ್ರೆಸ್ ವರಿಷ್ಠ ನಾಯಕ ರಾಹುಲ್ ಗಾಂಧಿ ಅವರ ಸಾಮಾಜಿಕ ಜಾಲತಾಣ ಟ್ವಿಟ್ಟರ್ ಖಾತೆಯನ್ನು ಸ್ಥಗಿತೊಳಿಸಿದ್ದು, ಇದನ್ನು ಪ್ರತಿಭಟಿಸಿ ಬೆಂಗಳೂರಿನ ಟ್ವಿಟ್ವರ್ ಕಚೇರಿ ಮುಂದೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

- Advertisement -


ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನ ಬೆನ್ನಿಗಾನ ಹಳ್ಳಿಯ ಟ್ವಿಟ್ವರ್ ಇಂಡಿಯಾ ಕಚೇರಿ ಮುಂದೆ ನೂರಾರು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಟ್ವಿಟ್ಟರ್ ಸಂಸ್ಥೆಯ ಧೋರಣೆಯನ್ನು ಖಂಡಿಸಿದರು. ರಾಹುಲ್ ಗಾಂಧಿ ಅವರ ಟ್ವಿಟ್ವರ್ ಖಾತೆಯನ್ನು ಕೂಡಲೇ ಪುನರ್ ಸ್ಥಾಪಿಸದಿದ್ದರೆ ಟ್ವಿಟ್ಟರ್ ಇಂಡಿಯಾ ಕಚೇರಿಗೆ ಮುತ್ತಿಗೆ ಹಾಕಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.


“ ಅತ್ಯಾಚಾರಿಗಳನ್ನು ಟ್ವಿಟ್ವರ್ ಯಾಕೆ ರಕ್ಷಿಸುತ್ತಿದೆ” “ ಕೂಡಲೇ ರಾಹುಲ್ ಗಾಂಧಿ ಅವರು ಟ್ವಿಟ್ವರ್ ಖಾತೆಯನ್ನು “ ಪುನರ್ ಸ್ಥಾಪಿಸಿ” ಎಂದು ಭಿತ್ತಿಪತ್ರಗಳನ್ನು ಹಿಡಿದು ಯುವ ಕಾರ್ಯಕರ್ತರು ಘೋಷಣೆ ಕೂಗಿದರು. ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ, ದೆಹಲಿ ಕಂಟೋನ್ಮೆಂಟ್ ನಲ್ಲಿ 9 ವರ್ಷದ ಬಾಲಕಿಯ ಮೇಲಿನ ಹೀನ ಅತ್ಯಾಚಾರ ಪ್ರಕರಣದ ಸಂಸತ್ರಸ್ಥರಿಗೆ ಸಾಂತ್ವನ ಹೇಳುವ ಚಿತ್ರ ಹಂಚಿಕೊಂಡ ಕಾರಣದಿಂದ ರಾಹುಲ್ ಗಾಂಧಿ ಅವರ ಟ್ವಿಟ್ಟರ್ ಖಾತೆಯನ್ನು ಸ್ಥಗಿತಗೊಳಿಸಿರುವುದು ಖಂಡನೀಯ. ಮುಂದಿನ 24 ಗಂಟೆಗಳಲ್ಲಿ ಟ್ವಿಟ್ಟರ್ ಖಾತೆ ಪುನಃ ಚಾಲನೆಗೊಳ್ಳದಿದ್ದರೆ ಹೋರಾಟವನ್ನು ತೀವ್ರಗೊಳಿಸಲಾಗುವುದು, ಟ್ವಿಟ್ಟರ್ ಇಂಡಿಯಾ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಅವರು ಎಚ್ಚರಿಕೆ ನೀಡಿದರು.

- Advertisement -


ಎರಡು ದಿನಗಳಿಂದ ಟ್ವಿಟ್ಟರ್ ಖಾತೆ ಸ್ಥಗಿತಗೊಳಿಸಿದ್ದು, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುತ್ತಿರುವ ಧೋರಣೆ ಖಂಡನೀಯ. ಇಂದು ಕೇವಲ ಸಾಂಕೇತಿಕವಾಗಿ ಪ್ರತಿಭಟನೆ ಮಾಡಿದ್ದೇವೆ. ಟ್ವಿಟ್ಟರ್ ತನ್ನ ಧೋರಣೆಯನ್ನು ಇದೇ ರೀತಿ ಮುಂದುವರೆಸಿದರೆ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ನೇತೃತ್ವದಲ್ಲಿ ಟ್ವಿಟ್ಟರ್ ಇಂಡಿಯಾ ಕಚೇರಿಗೆ ಮುತ್ತಿಗೆ ಹಾಕಿ ನಮ್ಮ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.


ಟ್ವಿಟ್ಟರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕರು, ಅಧ್ಯಕ್ಷರು, ಆಡಳಿತ ಮಂಡಳಿಯವರು ಕೂಡಲೇ ಎಚ್ಚೆತ್ತುಕೊಳ್ಳಬೇಕು. ಟ್ವಿಟ್ಟರ್ ಅನ್ನು ಯಾವುದೇ ಕಾರಣಕ್ಕೂ ಕೇಸರೀಕರಣ ಮಾಡಬಾರದು. ಟ್ವಟ್ಟರ್ ಕೇವಲ ಬಿಜೆಪಿಯವರಿಗೆ ಸೇರಿದ ಆಸ್ತಿ ಅಲ್ಲ. ಟ್ವಿಟ್ಟರ್ ಎಲ್ಲರಿಗೂ ಸೇರಿದ್ದು, ಅತ್ಯಾಚಾರಿಗಳನ್ನು ಬೆಂಬಲಿಸುವ ಟ್ವಿಟ್ಟರ್ ಧೋರಣೆ ಸರಿಯಲ್ಲ ಎಂದು ಎಂ.ಎಸ್. ರಕ್ಷಾ ರಾಮಯ್ಯ ಹೇಳಿದರು.

Join Whatsapp