Home ಟಾಪ್ ಸುದ್ದಿಗಳು ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ಜಬ್ಬಾರ್‌ ನೇಮಕ

ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ಜಬ್ಬಾರ್‌ ನೇಮಕ

ಬೆಂಗಳೂರು: ಕೆ.ಅಬ್ದುಲ್‌ ಜಬ್ಬಾರ್‌ ಅವರನ್ನು ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರನ್ನಾಗಿ ಕೆಪಿಸಿಸಿ ನೇಮಿಸಿದೆ.


ಪ್ರಮುಖ ಅಲ್ಪಸಂಖ್ಯಾತ ಮುಖಂಡ, ವಿಧಾನ ಪರಿಷತ್‌ನ ಮಾಜಿ ಸದಸ್ಯ, ದಾವಣಗೆರೆ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರೂ ಆಗಿದ್ದ ಅಬ್ದುಲ್‌ ಜಬ್ಬಾರ್‌ ಅವರನ್ನು ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರನ್ನಾಗಿ ನೇಮಿಸಬೇಕೆಂದು ಡಿ.ಕೆ.ಶಿವಕುಮಾರ್‌ ಅವರು ಸಲ್ಲಿಸಿದ್ದ ಪ್ರಸ್ತಾವನೆಯನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅನುಮೋದಿಸಿದ್ದು ಅದರಂತೆ ಪಕ್ಷ ಶುಕ್ರವಾರ ಈ ನೇಮಕ ಮಾಡಿ ಆದೇಶ ಹೊರಡಿಸಿದೆ.


ಮುಂಬರುವ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಪಕ್ಷವನ್ನು ಅಣಿಗೊಳಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಹೊಸ ತಂಡ ನೀಡುವ ಪ್ರಕ್ರಿಯೆ ಆರಂಭಿಸಿದ್ದಾರೆಂದು ತಿಳಿದು ಬಂದಿದೆ.

Join Whatsapp
Exit mobile version