ತಡವಾದ ಜಾಕ್ವೆಲಿನ್ ಫರ್ನಾಂಡಿಸ್ ಬಂಧನ: ಇ.ಡಿ.ಯನ್ನು ತರಾಟೆಗೆ ತೆಗೆದುಕೊಂಡ ದೆಹಲಿ ಕೋರ್ಟ್

Prasthutha|

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಇನ್ನೂ ಏಕೆ ಬಂಧಿಸಿಲ್ಲ ಎಂದು ತರಾಟೆಗೆ ತೆಗೆದುಕೊಂಡಿರುವ ದೆಹಲಿ ನ್ಯಾಯಾಲಯ, ಜಾರಿ ನಿರ್ದೇಶನಾಲಯ ‘ಪಿಕ್  ಅಂಡ್ ಚೂಸ್’ ನೀತಿಯನ್ನು ಅಳವಡಿಸಿಕೊಂಡಿದೆ ಎಂದು ಅದು ಆರೋಪಿಸಿದೆ.

- Advertisement -

200 ಕೋಟಿ ರೂ. ಮನಿ ಲಾಂಡರಿಂಗ್ ಪ್ರಕರಣದಲ್ಲಿ ಆರೋಪಿ ಸುಕೇಶ್‌ ಚಂದ್ರಶೇಖರ್‌ ಜತೆಗೆ ನಂಟು ಹೊಂದಿದ ಆರೋಪ ಹೊತ್ತಿರುವ ಬಾಲಿವುಡ್‌ ನಟಿ ಜಾಕ್ವೆಲಿನ್‌ ಫರ್ನಾಂಡಿಸ್ ಜಾಮೀನಿಗೆ ವಿರೋಧ ವ್ಯಕ್ತಪಡಿಸಿದ ಜಾರಿ ನಿರ್ದೇಶನಾಲಯವನ್ನು ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಮೂರು ದಿನದ ಅಂತರದಲ್ಲಿ ಎರಡನೇ ಬಾರಿಗೆ ಕೇಂದ್ರೀಯ ತನಿಖಾ ಸಂಸ್ಥೆ ಕಾರ್ಯವೈಖರಿಗೆ ಕೋರ್ಟ್‌ ಅಸಮಾಧಾನ ಹೊರ ಹಾಕಿದೆ.

ಸುಕೇಶ್ ಚಂದ್ರಶೇಖರ್ ಅವರ ವಿರುದ್ಧ ಲುಕ್‌ ಔಟ್ ಸುತ್ತೋಲೆ ಹೊರಡಿಸಿದ್ದರೂ ಸಂಸ್ಥೆಯು ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಏಕೆ ಬಂಧಿಸಲಿಲ್ಲ ಎಂದು ಪ್ರಶ್ನಿಸಿದೆ.

- Advertisement -

ನೋಟಿಸ್‌ ನೀಡಿದ್ದರೂ ನಟಿಯನ್ನು ಏಕೆ ಬಂಧಿಸಲಿಲ್ಲ? ಒಬ್ಬೊಬ್ಬರಿಗೆ ಒಂದೊಂದು ನೀತಿ ಏಕೆ,” ಎಂದು ನ್ಯಾಯಾಧೀಶರು ಪ್ರಶ್ನೆ ಮಾಡಿದ್ದಾರೆ. ನಟಿಯ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಾಲಯ, ಶುಕ್ರವಾರ ತೀರ್ಪು ನೀಡುವ ಸಾಧ್ಯತೆ ಇದೆ.

200 ಕೋಟಿ ರೂ. ಸುಲಿಗೆ ಪ್ರಕರಣದ ಆರೋಪಿ ಸುಕೇಶ್‌ ಚಂದ್ರಶೇಖರ್‌, ನಟಿ ಜಾಕ್ವೆಲಿನ್‌ ಅವರಿಗೆ 7.14 ಕೋಟಿ ರೂ. ಮೌಲ್ಯದ ಉಡುಗೊರೆ ನೀಡಿದ್ದಾನೆ ಎಂದು ತನಿಖಾ ಸಂಸ್ಥೆ ಆರೋಪಿಸಿತ್ತು. ಇದಲ್ಲದೆ ಕೋಟ್ಯಂತರ ಅವ್ಯವಹಾರದ ತನಿಖೆಗೆ ನಟಿ ಸಹಕಾರ ನೀಡುತ್ತಿಲ್ಲ. ದೇಶ ಬಿಟ್ಟು ಓಡಿ ಹೋಗುವ ಪ್ರಯತ್ನ ಮಾಡಿದ್ದಾರೆ. ಹೀಗಾಗಿ ಜಾಮೀನು ಮಂಜೂರು ಮಾಡಬಾರದು ಎಂದು ಇಡಿ ಪರ ವಕೀಲರು ವಾದಿಸಿದ್ದರು.

Join Whatsapp