Home ಕರಾವಳಿ ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ಮುಖಕ್ಕೆ ಮಸಿ ಬಳಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಿಸಿದ...

ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ಮುಖಕ್ಕೆ ಮಸಿ ಬಳಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಿಸಿದ ಪ್ರತಿಭಾ ಕುಳಾಯಿ

ಸುರತ್ಕಲ್ : ಬಿಲ್ಲವರು ಮತ್ತು ಕೋಟಿ ಚೆನ್ನಯರ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ ಆರೋಪ ಹೊತ್ತಿರುವ ಬಿಜೆಪಿ ಜಿಲ್ಲಾ ಮುಖಂಡ ಜಗದೀಶ್ ಅಧಿಕಾರಿ ಮುಖಕ್ಕೆ ಮಸಿ ಬಳಿದರೆ ಒಂದು ಲಕ್ಷ ರೂ. ಬಹುಮಾನ ನೀಡುವುದಾಗಿ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಘೋಷಿಸಿದ್ದಾರೆ.

ಫೇಸ್ ಬುಕ್ ನಲ್ಲಿ ಈ ಬಗ್ಗೆ ಒಂದು ವೀಡಿಯೊವೊಂದನ್ನು ಪ್ರತಿಭಾ ಕುಳಾಯಿ ಪೋಸ್ಟ್ ಮಾಡಿದ್ದಾರೆ.

ಮೂರು ದಿನಗಳ ಒಳಗಾಗಿ ಗರಡಿಗೆ ಆಗಮಿಸಿ ಜಗದೀಶ್ ಅಧಿಕಾರಿ ಕ್ಷಮೆ ಕೇಳಬೇಕು. ಇಲ್ಲದಿದ್ದಲ್ಲಿ ಬಿಲ್ಲವ ಸಮುದಾಯದ ಯಾರಾದರೂ ಪ್ರಥಮವಾಗಿ ಅವರ ಮುಖಕ್ಕೆ ಮಸಿ ಬಳಿಯಿರಿ. ಒಂದು ಲಕ್ಷ ರೂ. ನಗದು ಬಹುಮಾನ ನೀಡುತ್ತೇನೆ ಎಂದು ಪ್ರತಿಭಾ ಕುಳಾಯಿ ಹೇಳಿದ್ದಾರೆ.

ಸಂಘಟನೆಗಾಗಿ ನಾಯಕರಿಗಾಗಿ ಜೈಲು ಸೇರುತ್ತೀರಿ. ಆದರೆ ನಿಮ್ಮನ್ನು ಬಿಡಿಸಿಕೊಂಡು ಬರಲು ಯಾರೂ ಮುಂದೆ ಬರುತ್ತಿಲ್ಲ. ಇದನ್ನು ಪ್ರಶ್ನಿಸುವ ತಾಕತ್ತು ನಮ್ಮ ಯುವಕರಿಗಿಲ್ಲ ಎಂದು ಪ್ರತಿಭಾ ಕುಳಾಯಿ ಪುನರುಚ್ಚರಿಸಿದ್ದಾರೆ.  

Join Whatsapp
Exit mobile version