ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ಗುರಿ: ಜಗದೀಶ್ ಶೆಟ್ಟರ್

Prasthutha|

ಹುಬ್ಬಳ್ಳಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ ಕಡೆ ಪ್ರವಾಸ ಮಾಡುತ್ತೇನೆ. ಉತ್ತರ ಕರ್ನಾಟಕ ಭಾಗದ 11 ಸ್ಥಾನಗಳಲ್ಲಿ 7 ಸ್ಥಾನಗಳಲ್ಲಿ ಗೆಲ್ಲಲು ಶ್ರಮಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ್ ಹೇಳಿದರು.

- Advertisement -


ಶನಿವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಗುರಿ ಇಟ್ಟುಕೊಳ್ಳಲಾಗಿದೆ. ಪಕ್ಷವು ನನ್ನ ಅನುಭವ ಬಳಸಿಕೊಳ್ಳಲಿದೆ ಎಂದರು.
ವಿಧಾನ ಪರಿಷತ್ ಸದಸ್ಯನಾಗಿರುವುದು ನನ್ನ ರಾಜಕೀಯ ಜೀವನದಲ್ಲಿ ಹೊಸ ಅಧ್ಯಾಯ. ಈ ಎರಡನೇ ಇನಿಂಗ್ಸ್ ನಲ್ಲಿ ಉತ್ತಮ ಫಲಿತಾಂಶ ಸಿಗುವ ವಿಶ್ವಾಸ ಇದೆ ಎಂದು ಹೇಳಿದರು.