Home ಟಾಪ್ ಸುದ್ದಿಗಳು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ಗುರಿ: ಜಗದೀಶ್ ಶೆಟ್ಟರ್

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ಗುರಿ: ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ ಕಡೆ ಪ್ರವಾಸ ಮಾಡುತ್ತೇನೆ. ಉತ್ತರ ಕರ್ನಾಟಕ ಭಾಗದ 11 ಸ್ಥಾನಗಳಲ್ಲಿ 7 ಸ್ಥಾನಗಳಲ್ಲಿ ಗೆಲ್ಲಲು ಶ್ರಮಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ್ ಹೇಳಿದರು.


ಶನಿವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಗುರಿ ಇಟ್ಟುಕೊಳ್ಳಲಾಗಿದೆ. ಪಕ್ಷವು ನನ್ನ ಅನುಭವ ಬಳಸಿಕೊಳ್ಳಲಿದೆ ಎಂದರು.
ವಿಧಾನ ಪರಿಷತ್ ಸದಸ್ಯನಾಗಿರುವುದು ನನ್ನ ರಾಜಕೀಯ ಜೀವನದಲ್ಲಿ ಹೊಸ ಅಧ್ಯಾಯ. ಈ ಎರಡನೇ ಇನಿಂಗ್ಸ್ ನಲ್ಲಿ ಉತ್ತಮ ಫಲಿತಾಂಶ ಸಿಗುವ ವಿಶ್ವಾಸ ಇದೆ ಎಂದು ಹೇಳಿದರು.

Join Whatsapp
Exit mobile version