Home ಟಾಪ್ ಸುದ್ದಿಗಳು ಬಿಜೆಪಿಯನ್ನು ಟೀಕಿಸುವುದಿಲ್ಲ, ಅಲ್ಲಿಯ ಕೆಲವರಿಂದ ನನಗೆ ಅನ್ಯಾಯವಾಗಿದೆ: ಜಗದೀಶ್ ಶೆಟ್ಟರ್

ಬಿಜೆಪಿಯನ್ನು ಟೀಕಿಸುವುದಿಲ್ಲ, ಅಲ್ಲಿಯ ಕೆಲವರಿಂದ ನನಗೆ ಅನ್ಯಾಯವಾಗಿದೆ: ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಬಿಜೆಪಿಯನ್ನು ಟೀಕಿಸುವುದಿಲ್ಲ. ಅಲ್ಲಿಯ ಕೆಲವರಿಂದ ನನಗೆ ಅನ್ಯಾಯವಾಗಿದೆ ಆ ಬಗ್ಗೆ ಬೇಸರವಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಕಾಂಗ್ರೆಸ್ ಸೇರಿದ ಬಳಿಕ ಹುಬ್ಬಳ್ಳಿಗೆ ಆಗಮಿಸಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸೇರಿದ ಬಳಿಕ ನಾನು ಬಿಜೆಪಿ ಟೀಕಿಸಬೇಕೆಂದಿಲ್ಲ. ರಾಜ್ಯದಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ ನಾಯಕರಲ್ಲಿ ನಾನೂ ಒಬ್ಬ. ಅಲ್ಲಿ ನನಗೆ ಉಸಿರುಗಟ್ಟಿದ ವಾತಾವರಣ ನಿರ್ಮಾಣ ಮಾಡಿದರು. ಕೆಲವರ ಷಡ್ಯಂತ್ರದಿಂದಾಗಿ ಪಕ್ಷ ಬಿಡಬೇಕಾಗಿ ಬಂತು. ಅವರ ಬಗ್ಗೆ ನನಗೆ ಅಸಮಾಧಾನವಿದೆ ಎಂದರು.

ನಾನು ಅಧಿಕಾರಕ್ಕೆ ಅಂಟಿಕೊಂಡಿರಲಿಲ್ಲ. ರಾಜಕೀಯ ಸನ್ಯಾಸಕ್ಕೂ ಸಿದ್ಧನಿದ್ದೆ. ಆದರೆ, ಪಕ್ಷ ನನ್ನೊಂದಿಗೆ ಸಕಾರಾತ್ಮಕವಾಗಿ ನಡೆದುಕೊಳ್ಳಲಿಲ್ಲ. ಜನರ ವಿಶ್ವಾಸ ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ ಎಂದರು.

Join Whatsapp
Exit mobile version