ಇಲ್ಲಿಯವರೆಗೆ ಸಹಕಾರ ಕೊಟ್ಟಿದ್ದಕ್ಕೆ ಡಿಕೆಶಿ, ಸಿಎಂಗೆ ಧನ್ಯವಾದ: ಜಗದೀಶ್ ಶೆಟ್ಟರ್

Prasthutha|

►ಮೋದಿ ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಬೇಕು

- Advertisement -


ನವದೆಹಲಿ: ಇಲ್ಲಿಯವರೆಗೆ ಸಹಕಾರ ಕೊಟ್ಟಿದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್, ಹಾಗೂ ಸಿಎಂ ಸಿದ್ದರಾಮಯ್ಯಗೆ ಧನ್ಯವಾದಗಳು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.


ಕಾಂಗ್ರೆಸ್ ಪಕ್ಷದಿಂದ ಮತ್ತೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ ಬಳಿಕ ಜಗದೀಶ್ ಶೆಟ್ಟರ್ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಸಂದರ್ಭದಲ್ಲಿ ಅವರು ಕೂಡ ಒಳ್ಳೆಯ ರೀತಿಯಲ್ಲಿ ಗೌರವ ಸ್ಥಾನ-ಮಾನವನ್ನು ಕೊಟ್ಟಿದ್ದಾರೆ ಎಂದರು.

- Advertisement -


ಬಿಜೆಪಿ ಪಕ್ಷಕ್ಕೆ ಮತ್ತೆ ಸೇರ್ಪಡೆಯಾಗಿದ್ದಕ್ಕೆ ಬಹಳ ಸಂತಸ ಆಗಿದೆ. ಮತ್ತೆ ಬಿಜೆಪಿಗೆ ಮರಳಬೇಕೇಂದು ನಾಯಕರ ಮನವಿ ಮಾಡಿದ್ದರು. ಅಮಿತ್ ಶಾ ಅವರು ನನ್ನನ್ನು ಗೌರವದಿಂದ ಬರಮಾಡಿಕೊಂಡಿದ್ದಾರೆ ಎಂದು ಹೇಳಿದರು. ಪಕ್ಷಕ್ಕೆ ನಿಷ್ಠನಾಗಿ ಕೆಲಸ ಮಾಡುತ್ತೇನೆ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಬೇಕು ಎಂದರು.



Join Whatsapp