ಬಿಜೆಪಿಗೆ ರಾಜೀನಾಮೆ ಘೋಷಿಸಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್​​

Prasthutha|

ಧಾರವಾಡ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ​ ರಾಜೀನಾಮೆ ನೀಡಿದ್ದಾರೆ.

- Advertisement -

ಈ ಬಾರಿ ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ.

ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್‌, ಕೇಂದ್ರ ಸಚಿವ ಜೋಶಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಏಪ್ರಿಲ್ 15ರಂದು ರಾತ್ರಿ ಜಗದೀಶ್ ಶೆಟ್ಟರ್​ ಮನವೊಲಿಸುವ ಪ್ರಯತ್ನ ನಡೆಸಿದರು. ಆದ್ರೆ, ಸಂಧಾನ ಸಭೆ ವಿಫಲವಾಗಿದ್ದು, ಜಗದೀಶ್ ಶೆಟ್ಟರ್​ ಅಂತಿಮವಾಗಿ ಬಿಜೆಪಿಗೆ ರಾಜೀನಾಮೆ ಘೋಷಣೆ ಮಾಡಿ, ಸ್ಪೀಕರ್ ಅವರಿಗೆ ರಾಜೀನಾಮೆ ನೀಡಿದರು.

- Advertisement -

ಬಿಜೆಪಿ ನಾಯಕರ ಜೊತೆ ಸಂಧಾನ ಸಭೆ ಬಳಿಕ ಹುಬ್ಬಳ್ಳಿಯ ನಿವಾಸದಲ್ಲಿ ಜಗದೀಶ್ ಶೆಟ್ಟರ್‌ ಮತ್ತೆ ಸುದ್ದಿಗೋಷ್ಠಿ ನಡೆಸಿ ರಾಜೀನಾಮೆ ಘೋಷಿಸಿದರು. ಏಪ್ರಿಲ್ 16ರಂದು ಭಾನುವಾರ ರಾಜೀನಾಮೆ ನೀಡುತ್ತೇನೆ. ರಾಜೀನಾಮೆ ಕೊಟ್ಟ ಬಳಿಕ ಮುಂದಿನ ನಿರ್ಧಾರ ಪ್ರಕಟಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.

Join Whatsapp