ಜಹಾಂಗೀರಪುರಿ ಘರ್ಷಣೆ: ವಿಎಚ್‌ಪಿ, ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

Prasthutha|

ನವದೆಹಲಿ: ಜಹಾಂಗೀರ್‌ಪುರಿಯಲ್ಲಿ ಅನುಮತಿಯಿಲ್ಲದೆ ಧಾರ್ಮಿಕ ಮೆರವಣಿಗೆ ನಡೆಸಿದ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗದಳದ ಕೆಲವು ಸದಸ್ಯರ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

- Advertisement -

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ವಿಎಚ್‌ಪಿಯ ಜಿಲ್ಲಾ ಸೇವಾ ಪ್ರಮುಖ್ ಪ್ರೇಮ್ ಶರ್ಮಾ ಅವರನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿ ಪೊಲೀಸರ ಈ ನಡೆಯ ವಿರುದ್ಧ ನ್ಯಾಯಾಲಯಕ್ಕೆ ಹೋಗುವುದಾಗಿ ವಿಹಿಂಪದ ರಾಷ್ಟ್ರೀಯ ವಕ್ತಾರ ವಿನೋದ್ ಬನ್ಸಾಲ್ ತಿಳಿಸಿದ್ದಾರೆ.

- Advertisement -

ಜೊತೆಗೆ ಸುಲಿಗೆಗೆ ಬಳಸಲಾದ ಬಾಟಲಿಗಳನ್ನು ವ್ಯವಸ್ಥೆಗೊಳಿಸಿದ ಆರೋಪದ ಮೇಲೆ ಶೇಖ್ ಹಮೀದ್ ಎಂಬವರನ್ನು ಬಂಧಿಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ ಉಷಾ ರಂಗಾನಿ ತಿಳಿಸಿದ್ದಾರೆ.

ಈ ಮಧ್ಯೆ ಜಹಾಂಗೀರ್ ಪುರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮತ್ತು ಇಂತಹ ಘಟನೆ ಪುನರಾವರ್ತನೆಯಾಗದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೆಹಲಿ ಪೊಲೀಸರಿಗೆ ಸೂಚಿಸಿದ್ದಾರೆ.

ಶನಿವಾರ ಸಂಜೆ ಯಾವುದೇ ಅನುಮತಿಯಿಲ್ಲದೆ ಮೆರವಣಿಗೆ ನಡೆಸಲಾಯಿತು ಮತ್ತು ವಿಎಚ್‌ಪಿಯ ಜಿಲಾ ಸೇವಾ ಪ್ರಮುಖ್ ಪ್ರೇಮ್ ಶರ್ಮಾ ಎಂಬ ವ್ಯಕ್ತಿಯನ್ನು ಐಪಿಸಿ ಸೆಕ್ಷನ್ 188ರ ಅಡಿಯಲ್ಲಿ ಬಂಧಿಸಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ.

ಸದ್ಯ ಪ್ರಕರಣವನ್ನು ಕ್ರೈಂ ಬ್ರಾಂಚ್‌ಗೆ ವರ್ಗಾಯಿಸಲಾಗಿದ್ದು, ವಿಶೇಷ ಕೋಶದ ವಾಯುವ್ಯ ಜಿಲ್ಲಾ ಪೊಲೀಸ್ ಮತ್ತು ಗುಪ್ತಚರ ಫ್ಯೂಷನ್ ಮತ್ತು ಸ್ಟ್ರಾಟೆಜಿಕ್ ಆಪರೇಷನ್ಸ್ (IFSCO) ಕೂಡ ಪ್ರಕರಣದ ತನಿಖೆಗೆ ನೆರವಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

Join Whatsapp