ಕಲಬುರಗಿ: ಜೈ ಭಾರತ್ ಮಾತಾ ಸೇವಾ ಸಮಿತಿ ಸಂಸ್ಥಾಪಕ ಅಧ್ಯಕ್ಷ, ಕರ್ನಾಟಕ-ಮಹಾರಾಷ್ಟ್ರದಲ್ಲಿ ಭಾರಿ ಪ್ರಭಾವ ಹೊಂದಿರುವ ಹವಾ ಮಲ್ಲಿನಾಥ ಮುತ್ಯಾರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕಲಬುರಗಿ 2 ನೇ ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. ಅಟ್ರಾಸಿಟಿ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಕುಮ್ಮಕ್ಕು ಆರೋಪದ ಹಿನ್ನೆಲೆ ಆತನ ಮೇಲೆ ಪ್ರಕರಣ ದಾಖಲಾಗಿತ್ತು.
ಹವಾ ಮಲ್ಲಿನಾಥ ಮುತ್ಯಾ ಸಂಬಂಧಿ ಪ್ರಕಾಶ್ ಮೇಲೆ ಅಟ್ರಾಸಿಟಿ ಮತ್ತು ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಹವಾ ಮಲ್ಲಿನಾಥ ಮುತ್ಯಾ ವಿರುದ್ಧ ಆರೋಪಿಗೆ ಸಹಕರಿಸಿದ ಆರೋಪದಲ್ಲಿ 498/A, 506,109, 34 ಅಡಿ 2018 ರಲ್ಲಿ ಕಲಬುರಗಿಯ ಎಂ ಬಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ವರ್ಷಗಳಿಂದ ಹವಾ ಮಲ್ಲಿನಾಥ್ ಮುತ್ಯಾ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ.
ನ್ಯಾಯಾಲಯ ಬಾಡಿ ವಾರೆಂಟ್ ಮಾಡಿದ ಕಾರಣ ಇಂದು ನ್ಯಾಯಾಲಯದ ಮುಂದೆ ಹವಾ ಮಲ್ಲಿನಾಥ ಮುತ್ಯಾ ಶರಣಾಗಿದ್ದರು.
ಜೈ ಭಾರತ್ ಮಾತಾ ಸೇವಾ ಸಮಿತಿ ಸಂಸ್ಥಾಪಕ ಅಧ್ಯಕ್ಷ ಹವಾ ಮಲ್ಲಿನಾಥ ಮುತ್ಯಾ ಕರ್ನಾಟಕ-ಮಹಾರಾಷ್ಟ್ರದಲ್ಲಿ ಭಾರಿ ಪ್ರಭಾವ ಹೊಂದಿದ್ದಾರೆ.